ಬೆಂಗಳೂರು: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರಿಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಚೇತನ್ ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ ಅವರು ಸಹ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ನಾಗಮಂಗಲ ಕ್ಷೇತ್ರದ ಮಾಜಿ ಶಾಸಕರೂ ಆಗಿರುವ ಶಿವರಾಮೇಗೌಡರ ಜೊತೆ ಅವರ ಬೆಂಬಲಿಗರು ಸಹ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಪಕ್ಷಕ್ಕೆ ಸೇರ್ಪಡೆಯಾದ ಶಿವರಾಮೇಗೌಡ ಹಾಗೂ ಚೇತನ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ವಾಗತಿಸಿದರು. ಈ ವೇಳೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಕೂಡ ಉಪಸ್ಥಿತರಿದ್ದರು.





