ವಿಜಯಪುರ: ಕೆಲಸಕ್ಕೆ ಬರಲ್ಲ ಎಂದ ಕಾರ್ಮಿಕರ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಖೇಮು ರಾಠೋಡ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣ ಕುರಿತು ಮಾತನಾಡಿರುವ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಅವರು, ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಹುಡುಕಾಟ ನಡೆಸಿದ್ದೇವೆ. ಆದಷ್ಟು ಬಗ ಅವರನ್ನು ಕೂಡ ಬಂಧಿಸುತ್ತೇವೆ ಎಂದು ಹೇಳಿದ್ದಾರೆ.
ಘಟನೆ ವಿವರ:
ಕೆಲಸಕ್ಕೆ ಬರುವುದಿಲ್ಲ ಎಂದ ಕಾರ್ಮಿಕರಿಗೆ ಮಾಲೀಕನೋರ್ವ ಆತನ ಸಹಚರರ ಜೊತೆಗೂಡಿ ಹಿಗ್ಗಾಮುಗ್ಗಾ ಥಳಿಸಿದ್ದ. ಈ ಘಟನೆ ನಡೆಯುತ್ತಿದ್ದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಆರೋಪಿಗಳನ್ನು ಬಂಧಿಸುವಂತೆ ಆಗ್ರಹ ಕೇಳಿಬಂದಿತ್ತು.