ರಾಜ್ಯ

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.

ಬೆಂಗಳೂರಿನ ವಿಜಯನಗರದಲ್ಲಿರುವ ತಮ್ಮ ಮನೆಯಲ್ಲಿ ಸಂಜೆ ಆರು ಗಂಟೆ ಹೊತ್ತಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮನೆಯಲ್ಲಿದ್ದಾಗ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಬಳಿಕ ವೈದ್ಯರ ಸಲಹೆ ಮೇರೆಗೆ ಕೂಡಲೇ ಆಸ್ಪತ್ರೆಗೆ ದಾಖಲಿಸುವಾಗ ದಾರಿಮಧ್ಯೆ ಕೊನೆಯುಸಿರೆಳೆದರು.

ಕಳೆದ ಐದು ದಶಕಗಳಿಂದ ಸಾರಿಗೆ ನೌಕರರ ಪರ ಹೋರಾಟ ಮಾಡಿಕೊಂಡು ಬಂದಿದ್ದ ಸುಬ್ಬರಾವ್‌ ನಾಳೆ ಇದ್ದ (ಜನವರಿ 29) ಸಾರಿಗೆ ನೌಕರರ ಬೆಂಗಳೂರು ಚಲೋಗೆ ಕರೆ ನೀಡಿದ್ದರು. ಆದ್ರೆ, ಇದೀಗ ಅವರ ನಿಧನದಿಂದಾಗಿ ಬೆಂಗಳೂರು ಚಲೋ ಮುಂದೂಡಿಕೆಯಾಗಿದ್ದು, ಎಂದಿನಂತೆ ಬಸ್ ಸಂಚಾರ ಇರಲಿದೆ.

ಅನಂತ್ ಸುಬ್ಬರಾವ್ ಮೂಲತಃ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನವರು. ಅನಂತ ಸುಬ್ಬರಾವ್ ನೇತೃತ್ವದಲ್ಲೇ ನಾಳೆ ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಈಗ ಅನಂತ್ ಸುಬ್ಬರಾವ್ ನಿಧನರಾದ ಹಿನ್ನಲೆಯಲ್ಲಿ ನಾಳೆ ನಡೆಯಬೇಕಾಗಿದ್ದ ಸಾರಿಗೆ ನೌಕರರ ಮುಷ್ಕರ ಹಾಗೂ ಬೆಂಗಳೂರು ಚಲೋವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಎಂದಿನಂತೆ ಬಸ್ ಓಡಾಟ
ವಿವಿಧ ಬೇಡಿಕೆ ಈಡೇರಿಸುವಂತೆ ನಾಲ್ಕು ನಿಗಮದ ಸಾರಿಗೆ ನೌಕರರು ಬೆಂಗಳೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದರು. ಇದರಿಂದ ನಾಳೆ (ಜನವರಿ 29) ಬಸ್ ಸಂಚಾರ ಇರುತ್ತಾ ಇಲ್ಲಾ ಎಂದು ಪ್ರಯಾಣಿಕರಲ್ಲಿ ಗೊಂದಲ ಮೂಡಿಸಿತ್ತು. ಆದ್ರೆ, ಸಾರಿಗೆ ನೌಕರರ ಸಂಘದ ಮುಖಂಡ ಸಾವನ್ನಪ್ಪಿರುವುದರಿಂದ ಬೆಂಗಳೂರು ಚಲೋ ಮುಷ್ಕರವನ್ನು ಮುಂದೂಡಿದ್ದಾರೆ. ಹೀಗಾಗಿ ನಾಳೆ ಎಂದಿನಂತೆ ಬಸ್ ಸಂಚಾರ ಇರಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

1 hour ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

2 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

2 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

2 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

3 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

3 hours ago