Labour Minister Santosh Lad Meets Trade Union Leader and Former MLA Michael V. Fernandes
ಬೆಂಗಳೂರು : ಇತ್ತೀಚಿಗೆ ಅಪಘಾತಕೀಡಾಗಿಡ್ಡ ಕಾರಣ ವಿಶ್ರಾಂತಿ ಪಡೆದು ಆರೋಗ್ಯ ಚೇತರಿಸಿಕೊಳ್ಳುತ್ತಿರುವ ಕಾರ್ಮಿಕ ಮುಖಂಡ ಮಾಜಿ ಶಾಸಕ ಮೈಕೆಲ್ ವಿ ಫರ್ನಾಂಡಿಸ್ ಅವರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಬೆಂಗಳೂರಿನ ನಿವಾಸದಲ್ಲಿ ಸಂಜೆ ಮೈಖಲ್ ಅವರನ್ನು ಭೇಟಿ ಮಾಡಿದ ಸಂತೋಷ್ ಲಾಡ್, ಕಾರ್ಮಿಕ ಸಂಘಟನೆಯಲ್ಲಿ ತೊಡಗಿಸಿಕೊಂಡು ಕಾರ್ಮಿಕರ ಏಳಿಗೆಗೆಗಾಗಿ ಶ್ರಮಿಸಿದ್ದ ಮೈಕೆಲ್ ಅವರ ಸೇವೆಯನ್ನು ಸ್ಮರಿಸಿ ಕಾರ್ಮಿಕರ ಆಗುಹೋಗುಗಳ ಬಗ್ಗೆ ಚರ್ಚಿಸಿ, ಮೈಖಲ್ ಅವರನ್ನು ಬೇಗ ಗುಣಮುಖರಾಗುವಂತೆ ಹಾರೈಸಿದ ಸಚಿವ ಲಾಡ್, ಕಾರ್ಮಿಕರ ಏಳಿಗೆಗಾಗಿ ಇಲಾಖೆ ತಂದಿರುವ ಹೊಸ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.
ಇನ್ನು ಮೈಖಲ್ ಅವರು ಕಳೆದ 60 ವರ್ಷಗಳಿಂದ ಕಾರ್ಮಿಕ ಸಂಘಟನೆಯಲ್ಲಿ ಹಲವಾರು ಸಾರ್ವಜನಿಕ ಉದ್ದಿಮೆಗಳ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಾರ್ಮಿಕ ಇಲಾಖೆ ಸಚಿವರಾಗಿ ಕಾರ್ಮಿಕರಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವುದಕ್ಕೆ ಹಿರಿಯರಾದ ಮೈಕೆಲ್ ಅವರು ಸಂತೋಷ್ ಲಾಡ್ ಅವರ ಸೇವಾಕಾರ್ಯವನ್ನು ಮೆಚ್ಚಿ ಹರ್ಷ ವ್ಯಕ್ತಪಡಿಸಿ ಆಶೀರ್ವದಿಸಿದರು.
ಭೇಟಿ ಸಂದರ್ಭದಲ್ಲಿ ಫೆರ್ನಾಂಡಿಸ್ ಅವರ ಪತ್ನಿ ಡೂನ ಫೆರ್ನಾಂಡಿಸ್, ಲಾಡ್ ಅವರ ಸಹೋದರ ಹುಬ್ಬಳ್ಳಿ-ಧಾರವಾಡ ಕಾರ್ಪೊರೇಟರ್ ಮಯೂರ್ ಮೋರೆ, ಸಂಘಟನಾಕಾರದ ಲಕ್ಷ್ಮಯ್ಯ ಕಾಳಪ್ಪ ಸೇರಿದಂತೆ ಇತರರು ಭೇಟಿ ಸಂದರ್ಭದಲ್ಲಿ ಜೊತೆಗಿದ್ದರು.
ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…