ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು.
ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಕೊರತೆಯಾಗುವ ಸೂಚನೆಗಳಿವೆ ಎಂದರು.
ಜಿಲ್ಲಾಧಿಕಾರಿಗಳೇ ಹೊಣೆ
ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.
ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು, ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಬೇಕು ಎಂದರು.
ಅನುದಾನದ ಕೊರತೆಯಿಲ್ಲ
ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
213 ತಾಲ್ಲೂಕುಗಳಲ್ಲಿ ಸಮಸ್ಯೆ
ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲ್ಲೂಕುಗಳನ್ನು ಹಾಗೂ 2,410 ಗ್ರಾಮ ಪಂಚಾಯಿತಿಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲ್ಲೂಕುಗಳ 598 ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೊರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಬಗ್ಗೆ ಮುಖ್ಯಮಂತ್ರಿಗಳು ಮಾಹಿತಿ ಪಡೆದರು.
ಕಲುಷಿತ ನೀರು ಪೂರೈಕೆಯಾಗದಂತೆ ಕ್ರಮ ವಹಿಸಿ
ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಲುಷಿತ ನೀರಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…