ರಾಜ್ಯ

ಕೆರೆ ಒತ್ತುವರಿ ; ಗರಂ ಆದ ಸಿಎಂ : ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು : ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆಯನ್ನು ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ ನೀಡಿದರು.

ಶುಕ್ರವಾರ ವಿಧಾನಸೌಭದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ, ಎಸ್.ಪಿ ಹಾಗೂ ಸಿಇಒಗಳ ಸಭೆ ನಡೆಸಿ ಅವರು ಮಾತನಾಡಿದರು. ಸಭೆಯ ವೇಳೆ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು.

ರಾಜ್ಯದಲ್ಲಿ 10,931 ಕೆರೆಗಳು ಒತ್ತುವರಿಯಾಗಿವೆ. ಇದುವರೆಗೆ 6,065 ಕೆರೆಗಳ ಒತ್ತುವರಿ ತೆರವು ಮಾಡಲಾಗಿದೆ. ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ ಒತ್ತುವರಿ ತೆರವುಗೊಳಿಸಲು ಕಳೆದ ಸಭೆಯಲ್ಲಿ ತಿಳಿಸಿದ್ದರೂ ನಿರೀಕ್ಷಿತ ಪ್ರಗತಿಯಾಗಿಲ್ಲ. ಕೂಡಲೇ ಇದರ ಬಗ್ಗೆ ಗಮನಹರಿಸಿ, ಎಲ್ಲಾ ಕೆರೆಗಳ ಸಮೀಕ್ಷೆ ನಡೆಸಿ, ಒತ್ತುವರಿ ತೆರವುಗೊಳಿಸಿ, ಮಳೆ ನೀರು ಸರಾಗವಾಗಿ ಕೆರೆಗೆ ಹರಿದು ಬರುವಂತೆ ವ್ಯವಸ್ಥೆ ಮಾಡಬೇಕು. ಕೆರೆಗಳ ಒತ್ತುವರಿ ವಿಷಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದ ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಈ ವರ್ಷ 1395 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗುವಂತೆ ನೋಡಿಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸರಿಯಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇತರ ಪ್ರಮುಖ ಅಂಶಗಳು ಹೀಗಿವೆ…

•ಸಿಂಧುತ್ವ ಪ್ರಮಾಣ ಪತ್ರವನ್ನು ನಿಗದಿತವಾಗಿ ಒಂದು ತಿಂಗಳ ಒಳಗಾಗಿ ನೀಡಬೇಕಿದ್ದರೂ, ಅದನ್ನು ಕೆಲವು ಜಿಲ್ಲೆಗಳಲ್ಲಿ ತಿಂಗಳುಗಟ್ಟಲೆ ವಿಲೇವಾರಿ ಮಾಡದೆ ಸತಾಯಿಸುವ ಬಗ್ಗೆ ದೂರುಗಳು ಬರುತ್ತಿವೆ. ಅಂತಹ ವಿಳಂಬ ಪ್ರವೃತ್ತಿಯನ್ನು ಸಹಿಸಲು ಸಾಧ್ಯವಿಲ್ಲ.

•ಸರ್ಕಾರಿ ಶಾಲೆಗಳಿಗೆ ಎಲ್ಲಾ ಸವಲತ್ತುಗಳನ್ನು ನೀಡದರೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಫಲಿತಾಂಶ ಕಳಪೆಯಾಗಿರಲು ಕಾರಣವೇನು? ಈ ಬಗ್ಗೆ ಆತ್ಮಾವಲೋಕನ ನಡೆಸಬೇಕು. ತಮ್ಮ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಿಸುವುದು ಆಯಾ ಜಿಲ್ಲಾಧಿಕಾರಿ ಹಾಗೂ ಸಿಇಒಗಳ ಜವಾಬ್ದಾರಿ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸುಧಾರಣೆಗೆ ಹೆಚ್ಚಿನ ಅನುದಾನ ಒದಗಿಸುತ್ತಿದ್ದರೂ, ಫಲಿತಾಂಶದಲ್ಲಿ ಯಾವಾಗಲೂ ಹಿಂದಿರಲು ಕಾರಣವೇನು? ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ, ಸಿಇಒಗಳು ನಿರಂತರ ಗಮನ ಹರಿಸಬೇಕು.

* ರಾಜ್ಯದಲ್ಲಿ ಕಂದಾಯ ಗ್ರಾಮಗಳ ಘೋಷಣೆ ದಾಖಲೆ ಪ್ರಮಾಣದಲ್ಲಿ ಆಗಿದೆ. ಆದರೆ ಇನ್ನೂ ಬಾಕಿಯುಳಿದಿರುವ ಕಂದಾಯ ಗ್ರಾಮಗಳನ್ನು ಘೋಷಿಸುವ ಕಾರ್ಯ ಮುಂದಿನ 6ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಬಗರ್ ಹುಕುಂ ಅರ್ಜಿಗಳ ವಿಲೇವಾರಿ ತ್ವರಿತಗೊಳಿಸಬೇಕು. ಇದು ಯಾಕೆ ಕಡಿಮೆಯಾಗುತ್ತಿದೆ? ಪೋಡಿಮುಕ್ತ ಅಭಿಯಾನ ನಿರಂತರವಾಗಿ ಮುಂದುವರೆಸಬೇಕು. ಶೇ.63 ಪೋಡಿಮುಕ್ತ ಆಗಿದ್ದು, ಇದರಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು.

•ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ, ಕಬರಸ್ತಾನಗಳಿಗೆ ನಿವೇಶನ ಒದಗಿಸುವುದನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರುದ್ರಭೂಮಿ, ಕಬರಸ್ಥಾನಗಳಿಗೆ ಜಮೀನು ಒದಗಿಸುವುದನ್ನು ವಿಳಂಬ ಮಾಡಬಾರದು. ನಿವೇಶನಗಳು ಅಗತ್ಯವಿರುವ ಇಲಾಖೆಗಳಿಗೆ ನಿವೇಶನಗಳನ್ನು ಆದ್ಯತೆ ಮೇರೆಗೆ ಒದಗಿಸಬೇಕು. 1858 ಗ್ರಾಮೀಣ ಅಂಗನವಾಡಿಗಳಿಗೆ 5187 ನಗರ ಅಂಗನವಾಡಿಗಳಿಗೆ ನಿವೇಶನ ಅಗತ್ಯವಿದೆ. 14 ಸರ್ಕಾರಿ ಕಾಲೇಜು ನಿವೇಶನ ಹಂಚಿಕೆಯಾಗಿಲ್ಲ.

•ಅರಣ್ಯ ಹಕ್ಕುಗಳಿಗಾಗಿ 295176 ಅರ್ಜಿಗಳು ಸಲ್ಲಿಕೆಯಾಗಿದ್ದು, 16700 ಮಾತ್ರ ಅರಣ್ಯ ಹಕ್ಕು ಪತ್ರ ಒದಗಿಸಲಾಗಿದೆ. ಇದನ್ನು ಸರಿಯಾಗಿ ವಿಲೇವಾರಿ ಮಾಡಬೇಕು.

•ಜಿಲ್ಲಾಧಿಕಾರಿ, ತಹಶೀಲ್ದಾರ್, ಎಸಿ ಕೋರ್ಟ್ ಗಳಲ್ಲಿ ಪ್ರಕರಣಗಳನ್ನು ಸರಿಯಾಗಿ ವಿಲೇವಾರಿ ಮಾಡಬೇಕು. ಮೆರಿಟ್ ಮೇಲೆ ತೀರ್ಮಾನ ಮಾಡಬೇಕು. ಪ್ರಕರಣಗಳನ್ನು ಮುಂದಕ್ಕೆ ಹಾಕುವ ಪ್ರವೃತ್ತಿ ಇರಬಾರದು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago