ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲ್ಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಇದೇ ನವೆಂಬರ್.15ರಿಂದ ಲಕ್ಷ ದೀಪೋತ್ಸವ ನಡೆಯಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಮಂಜುನಾಥಸ್ವಾಮಿಯ ವಾರ್ಷಿಕ ಲಕ್ಷ ದೀಪೋತ್ಸವ ನಡೆಯಲಿದೆ.
ನವೆಂಬರ್.15ರಿಂದ 20ರವರೆಗೆ ಲಕ್ಷ ದೀಪೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನು ಓದಿ: ರಾಮನಗರಿ ಅಯೋಧ್ಯೆಯಲ್ಲಿ ಅದ್ಭುತ ದೀಪೋತ್ಸವ
ನವೆಂಬರ್.15ರಂದು ಬೆಳಿಗ್ಗೆ ಧರ್ಮಸ್ಥಳ ಪ್ರೌಢಶಾಲಾ ಮೈದಾನದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆಯಾಗಲಿದೆ. ಸಂಜೆ ಭಕ್ತರಿಂದ ಉಜಿರೆ ಜನಾರ್ಧನ ಸ್ವಾಮಿ ಸನ್ನಿಧಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆ ಪಾದಯಾತ್ರೆ ನಡೆಯಲಿದೆ. ಅಂದು ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸ ಕಟ್ಟೆ ಉತ್ಸವ, ನವೆಂಬರ್.16ರಂದು ಕರೆಕಟ್ಟೆ ಉತ್ಸವ ನಡೆಯಲಿದೆ.
ನವೆಂಬರ್.17ರಂದು ಲಲಿತೋದ್ಯಾನ ಉತ್ಸವ, ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಾ ಕಲಾಗೋಷ್ಠಿ ನಡೆಯಲಿದೆ. ನವೆಂಬರ್.18ರಂದು ಕಂಚಿ ಮಾರುಕಟ್ಟೆ ಉತ್ಸವ, ಸರ್ವಧರ್ಮ ಸಮ್ಮೇಳನ, ನವೆಂಬರ್.19ರಂದು ಗೌರಿ ಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ, ನವೆಂಬರ್.20ರಂದು ಶ್ರೀ ಚಂದ್ರನಾಥ ಸ್ವಾಮಿ ಸಮ ವಸರಣ ಪೂಜೆಯೊಂದಿಗೆ ಲಕ್ಷ ದೀಪೋತ್ಸವಕ್ಕೆ ತೆರೆ ಬೀಳಲಿದೆ. ಲಕ್ಷ ದೀಪೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಯ ಆಗಮಿಸಲಿದ್ದಾರೆ.
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್, ಕಮೆಂಟ್ ಮಾಡಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದರ್ಶನ್ ಪತ್ನಿ ವಿಜಯಲಕ್ಷ್ಮೀಗೆ ಸಿಸಿಬಿ ಪೊಲೀಸರು…