Mysore
20
broken clouds

Social Media

ಮಂಗಳವಾರ, 14 ಜುಲೈ 2026
Light
Dark

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ತನಿಖೆಗೆ ಸೂಚನೆ ನೀಡಿದ್ದಾರೆ.

ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆಯಲ್ಲಿ ಪ್ರವಾಸಿಗರ ಬೋಟ್‌ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಪ್ರವಾಸಿಗರ ಬೋಟ್‌ ಮುಳುಗಿ ಸಾವನ್ನಪ್ಪಿರುವ ಘಟನೆ ಆಘಾತ ತಂದಿದೆ ಎಂದು ಹೇಳಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹಾಗೂ ಬೋಟ್‌ ಮುಳುಗಿ ಸಾವು ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

 

Tags:
error: Content is protected !!