ಬೆಂಗಳೂರು: ಒಳ್ಳೆ ಬುದ್ದಿ ಕಲಿತು, ಚೆನ್ನಾಗಿ ಓದಿ ಅಪ್ಪ ಅಮ್ಮನಿಗೆ ಒಳ್ಳೆ ಹೆಸರು ತನ್ನಿ. ಇನ್ಮೇಲೆ ಯಾವುದೇ ಕೆಟ್ಟ ಕೆಲಸ ಮಾಡದೇ, ಒಳ್ಳೆ ಪ್ರಜೆಯಾಗಿ ಬಾಳಿ. ಇದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸರ್ಕಾರಿ ವೀಕ್ಷಣಾಲಯಕ್ಕೆ ಭೇಟಿ ನೀಡಿದ ವೇಳೆ ಮಕ್ಕಳಿಗೆ ಹೇಳಿದ ಬುದ್ದಿ ಮಾತು.
ಮಡಿವಾಳದ ಸ್ತ್ರೀ ಭವನದ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸರ್ಕಾರಿ ವೀಕ್ಷಣಾಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವರು, ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಭೇಟಿಯಾದರು. ಸನ್ನಡತೆ ಬೆಳೆಸಿಕೊಂಡು, ಉತ್ತಮ ಪ್ರಜೆಯಾಗಿ ಬಾಳಿ ಎಂದು ಮಾರ್ಗದರ್ಶನ ನೀಡಿದರು.
ಕರೆ ಸ್ವೀಕರಿಸಿದ ಸಚಿವರು
ಇದಕ್ಕೂ ಮುನ್ನ ಸ್ತ್ರೀ ಶಕ್ತಿ ಭವನದ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡಿದರು. ಈ ವೇಳೆ ಕೇಂದ್ರದ ಸಿಬ್ಬಂದಿ ಜೊತೆಗೆ ಸಹಾಯವಾಣಿಯ ಕಾರ್ಯ ನಿರ್ವಹಣೆ ಕುರಿತಂತೆ ಮಾಹಿತಿ ಸಂಗ್ರಹಿಸಿದರು. ಜೊತೆಗೆ ಕರೆಯೊಂದನ್ನು ಸ್ವೀಕರಿಸಿ, ಸಮಸ್ಯೆಯನ್ನು ಅಲಿಸಿದರು. ರಾತ್ರಿ ವೇಳೆ ಕೇಂದ್ರಕ್ಕೆ ಮತ್ತೊಮ್ಮೆ ಭೇಟಿ ನೀಡುವುದಾಗಿ ಹೇಳಿದರು.
ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಉಪಸ್ಥಿತರಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…