ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ನನ್ನ ಮೌನವೂ ವೀಕ್ನೆಸ್ ಅಲ್ಲಾ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್ನಲ್ಲಿ ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೊಗಲಿಲ್ಲ ಎಂದು ತಮ್ಮ ಮತ್ತು ಸತೀಶ್ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವಂದತಿಗೆ ಸ್ಪಷ್ಟನೆ ನೀಡಿದರು.
ಹೈಕಮಾಂಡ್ ಯಾಕೆ ತಡೆಯಿತು ಅನ್ನೋದನ್ನ ಸತೀಶ್ ಜಾರಕಿಹೊಳಿ ಅವರಿಗೆ ಕೇಳಿ. ಡಿಸಿಎಂ ಡಿಕೆ ಶಿವಕುಮಾರ್ ಅವರ ಬೆಳಗಾವಿ ಭೇಟಿಗೆ ಶಾಸಕರು, ಜಿಲ್ಲಾಧ್ಯಕ್ಷರು ಬಾರದಿರುವ ವಿಚಾರವಾಗಿ ಮಾತನಾಡಿದ ಅವರು ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲವಿತ್ತು. ಯಾರಾದರೂ ಬಂದು ಸ್ವಾಗತ ಮಾಡಬೇಕಿತ್ತು ಎಂದು ಹೇಳಿದರು.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…