ರಾಜ್ಯ

ನನ್ನ ಮೌನವೂ ವೀಕ್ನೆಸ್ ಅಲ್ಲಾ : ಸತೀಶ್ ಜಾರಕಿಹೊಳಿಗೆ ಲಕ್ಷ್ಮಿ ಹೆಬ್ಬಾಳ್ಕರ್‌ ಖಡಕ್ ಸಂದೇಶ

ಬೆಳಗಾವಿ : ಬೆಳಗಾವಿ ರಾಜಕಾರಣ ಮತ್ತೆ ಗರಿಗೆದರಿದೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿನ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಅನ್ಯರ ಹಸ್ತಕ್ಷೇಪ ಆಗುತ್ತಿದೆ. ನನ್ನ ಮೌನ ವೀಕ್ನೆಸ್​ ಅಲ್ಲ ಅಂತ ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್​ ಜಾರಕಿಹೊಳಿ ಪರೋಕ್ಷವಾಗಿ ಲಕ್ಷಿ ಹೆಬ್ಬಾಳ್ಕರ್​ ವಿರುದ್ಧ ವಾಗ್ದಾಳಿ ಮಾಡಿದ್ದರು. ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ನನ್ನ ಮೌನವೂ ವೀಕ್ನೆಸ್ ಅಲ್ಲಾ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲಾ ಕಾಂಗ್ರೆಸ್​ನಲ್ಲಿ ಸಣ್ಣ ಸಮಸ್ಯೆ ಕೂಡ ಇಲ್ಲ. ಬಹಳಷ್ಟು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ. ನನ್ನ ಮತ್ತು ಸತೀಶ್ ಅಣ್ಣವರ ಮಧ್ಯೆ ಯಾವುದೇ ಸಮಸ್ಯೆ ಇಲ್ಲ. ಮೈಸೂರಿಗೆ ಹೋಗಲು ಸತೀಶ್ ಜಾರಕಿಹೊಳಿ ಅಣ್ಣವರು ನನ್ನನ್ನು ಕರೆದಿದ್ದರು. ನನ್ನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಬೆಳಗಾವಿ ಜಿಲ್ಲೆಯ ಎಲ್ಲ ಶಾಸಕರು ಮೈಸೂರು ಹೋಗಲು ಪ್ಲ್ಯಾನ್ ಮಾಡಿದ್ದರು. ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ ಹಿನ್ನೆಲೆಯಲ್ಲಿ ನಾನು ಹೊಗಲಿಲ್ಲ ಎಂದು ತಮ್ಮ ಮತ್ತು ಸತೀಶ್​ ಜಾರಕಿಹೊಳಿ ಮಧ್ಯೆ ಮುಸುಕಿನ ಗುದ್ದಾಟವಿದೆ ಎಂಬ ವಂದತಿಗೆ ಸ್ಪಷ್ಟನೆ ನೀಡಿದರು.

ಹೈಕಮಾಂಡ್ ಯಾಕೆ ತಡೆಯಿತು ಅನ್ನೋದನ್ನ ಸತೀಶ್ ಜಾರಕಿಹೊಳಿ ಅವರಿಗೆ ಕೇಳಿ. ಡಿಸಿಎಂ ಡಿಕೆ ಶಿವಕುಮಾರ್​ ಅವರ ಬೆಳಗಾವಿ ಭೇಟಿಗೆ ಶಾಸಕರು, ಜಿಲ್ಲಾಧ್ಯಕ್ಷರು ಬಾರದಿರುವ ವಿಚಾರವಾಗಿ ಮಾತನಾಡಿದ ಅವರು ಅಧ್ಯಕ್ಷರ ಪ್ರವಾಸದಲ್ಲಿ ಮೊದಲು ಗೊಂದಲವಿತ್ತು. ಯಾರಾದರೂ ಬಂದು ಸ್ವಾಗತ ಮಾಡಬೇಕಿತ್ತು ಎಂದು ಹೇಳಿದರು.

 

lokesh

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

8 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

12 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

12 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

13 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

13 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

14 hours ago