ರಾಜ್ಯ

ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಅನೇಕ ಕಾರ್ಯಕ್ರಮ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ದೇವದಾಸಿಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದ್ದು, ದೇವದಾಸಿ ಅನಿಷ್ಟ ಪದ್ಧತಿ ನಿರ್ಮೂಲನೆಗೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿ.13) ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಹೇಮಲತಾ ನಾಯಕ್‌ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ದೇವದಾಸಿ ಮಹಿಳೆಯರು ಗೌರವಯುತ ಜೀವನ ನಡೆಸುವ ವಾತಾವರಣ ಸೃಷ್ಟಿ ಮಾಡಲಾಗಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿದ್ದು, ಅವರಿಗೂ ಸಿಗುವಂತೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ಅರ್ಹ ಫಲಾನುಭವಿಗಳಿಗೆ ಮಾಸಾಶನ ನೀಡಲಾಗುತ್ತಿದ್ದು, ಮಾಜಿ ದೇವದಾಸಿಯರಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ನೀಡಲಾಗುತ್ತಿದೆ. ಕೊಪ್ಪಳದಲ್ಲಿ ಪ್ರಸ್ತುತ 2,653 ದೇವದಾಸಿಯರಲ್ಲಿ 2550 ಮಹಿಳೆಯರಿಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಅಲ್ಲದೇ 45 ವರ್ಷ ಮೇಲ್ಪಟ್ಟ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ಈ ಯೋಜನೆಯಲ್ಲಿ ಪ್ರತಿ ಫಲಾನುಭವಿಗೆ ತಲಾ 30 ಸಾವಿರದಂತೆ ಸಹಾಯಧನವನ್ನು ನೀಡಲಾಗುತ್ತಿದೆ ಎಂದಿದ್ದಾರೆ.

ಸಾಮಾನ್ಯ ಮಹಿಳೆಯರಂತೆಯೇ ಮಾಜಿ ದೇವದಾಸಿ ಮಹಿಳೆಯರಿಗೂ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದ್ದು, ಮಾಜಿ ದೇವದಾಸಿ ವಸತಿ ಯೋಜನೆಯಡಿ ಕೊಪ್ಪಳ‌ ಜಿಲ್ಲೆಗೆ ಕಳೆದ 10 ವರ್ಷಗಳಲ್ಲಿ 823 ಮನೆಗಳು ಮಂಜೂರಾಗಿವೆ. ಅಲ್ಲದೇ ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟ, ಈ ಯೋಜನೆಯಡಿ ನಿವೇಶನ ಹೊಂದಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಗ್ರಾಮೀಣ ಪ್ರದೇಶದಲ್ಲಿ 1.75 ಲಕ್ಷ ರೂಪಾಯಿ ಮತ್ತು ನಗರ ಪ್ರದೇಶದಲ್ಲಿ 2 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜೀವ್‌ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

4 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

4 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

4 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

5 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

6 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

6 hours ago