ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ಹೊಂದಿದ ವಿಕಲಚೇತನರಿಗೆ ಮುಂರುವ ದಿನಗಳಲ್ಲಿ ವಿಮಾ ಮೊತ್ತನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವರರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.14) ವಿಧಾನಪರಿಷತ್ ಕಲಾಪದಲ್ಲಿ ಈ ಕುರಿತು ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರು, ಎಲ್ಲಾ ರೀತಿಯ ಅಂಗ ವೈಫಲ್ಯ ಒಳಗೊಂಡ ವಿಮೆ ಯೋಜನೆಗಳಿಯೇ? ವಿಶೇಷ ಚೇತನರಿಗೆ ಯಾವ ಬಗೆಯ ಸೌಲಭ್ಯಗಳಿವೆ ಎಂದು ಪ್ರಶ್ನಿಸಿದ್ದರು.
ಈ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಅಂಗವೀಕಲತೆ ನಿವಾರಣೆಗಾಗಿ ವೈದ್ಯಕೀಯ ಪರಿಹಾರ ನಿಧಿ ಹಾಗೂ ನಿರಾಮಯ ಆರೋಗ್ಯ ವಿಮಾ ಯೋಜನೆ ಇದೆ. ಆದರೆ ಈ ಯೋಜನೆಯನ್ನು ಮತ್ತಷ್ಟು ವಿಸ್ತರಿಸುವ ತೀರ್ಮಾನ ಮಾಡಿದ್ದೇವೆ ಎಂದರು.
ಇನ್ನು ವಿಕಲಚೇತನರಿಗೆ ಒಂದು ಲಕ್ಷದವರೆಗೆ ವಿಮೆ ಸೌಲಭ್ಯವಿದ್ದು, ಒಂದು ವರ್ಷಕ್ಕೆ ಒಂದು ಲಕ್ಷದವರೆಗೂ ವಿಮೆ ಸೌಲಭ್ಯವಿದೆ ಮುಂಬರುವ ದಿನಗಳಲ್ಲಿ ಅದನ್ನು ಐದು ಲಕ್ಷ ರೂ.ಗೆ ಏರಿಕೆ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದರು.