ಬೆಂಗಳೂರು: ಇಲ್ಲಿನ ಲಾಲ್‌ಬಾಗ್ ಉದ್ಯಾನವನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.
ಈ ಇಲಾಖೆಯೂ ಫಲಪುಷ್ಪ ಪ್ರದರ್ಶನವನ್ನು 16 ರಿಂದ 26 ರವರೆಗೆ ಅಂದರೆ ಒಟ್ಟು 11 ದಿನಗಳ ಕಾಲ ಏರ್ಪಡಿಸಲಾಗಿದೆ. ಆದರೆ ಈ ವರ್ಷದ ಫಲಪುಷ್ಪ ಪ್ರದರ್ಶನದಲ್ಲಿ ಮಹರ್ಷಿ ವಾಲ್ಮೀಕಿ ಜೀವನ ಹಾಗೂ ರಾಮಾಯಣ ಮಹಾಕಾವ್ಯವನ್ನು ಆಧಾರಿತಕ್ಕೆ ಕುರಿತಂತೆ ಆಕರ್ಷಕವಾದ ಪುಷ್ಪಗಳಲ್ಲಿ ಅರಳಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಲಾಗಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.
ಫಲ ಪುಷ್ಪ ಪ್ರದರ್ಶನಕ್ಕಾಗಿ ದೇಶ ವಿದೇಶಗಳಿಂದ ಸುಮಾರು 70 ತರಹದ 25 ಲಕ್ಷ ಹೂಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಚಳಿಗಾಲದಲ್ಲಿ ಬೆಳೆಯುವಂತಹ ಪೂಷಿಯಾ, ಅಗಪಾಂಥಸ್, ಸೈಕ್ಲೋಮನ್, ಟ್ಯೊಬಿರಸ್ ರೂಟೆಡ್ ಹಾಗೂ ಕ್ಯಾಲಾಲಿಲ್ಲ ಸೇರಿದಂತೆ ಅನೇಕ ಬಗೆಯ ಹೂಗಳನ್ನು ಪ್ರದರ್ಶನಕ್ಕಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರವಾಸಿಗರು ಬರಲಿದ್ದಾರೆ. ಈ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕರಿಗೆ ಟಿಕೆಟ್ ದರ ನಿಗದಿಪಡಿಸಲಾಗಿದೆ. ಅಂತೆಯೇ ಹಿರಿಯರಿಗೆ 80 ರಿಂದ 100 ರೂ. ಮಕ್ಕಳಿಗೆ 30 ರೂ. ನಿಗದಿಪಡಿಸಲಾಗಿದ್ದು,
ಶಾಲಾ ಸಮವಸ್ತ್ರ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂಬ ಮಾಹಿತಿ ಅಧಿಕಾರಿಗಳು ಮೂಲಗಳು ತಿಳಿಸಿವೆ.





