ರಾಜ್ಯ

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: ಗಣರಾಜ್ಯೋತ್ಸವ ಪ್ರಯುಕ್ತ ಕೆಲವೇ ದಿನಗಳಲ್ಲಿ ಆರಂಭ

ಬೆಂಗಳೂರು: ಇಲ್ಲಿನ ಲಾಲ್‌ಬಾಗ್‌ ಉದ್ಯಾನವನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ತೋಟಗಾರಿಕೆ ಇಲಾಖೆ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.

ಈ ಇಲಾಖೆಯೂ ಫಲಪುಷ್ಪ ಪ್ರದರ್ಶನವನ್ನು 16 ರಿಂದ 26 ರವರೆಗೆ ಅಂದರೆ ಒಟ್ಟು 11 ದಿನಗಳ ಕಾಲ ಏರ್ಪಡಿಸಲಾಗಿದೆ. ಆದರೆ ಈ ವರ್ಷದ ಫಲಪುಷ್ಪ ಪ್ರದರ್ಶನದಲ್ಲಿ ಮಹರ್ಷಿ ವಾಲ್ಮೀಕಿ ಜೀವನ ಹಾಗೂ ರಾಮಾಯಣ ಮಹಾಕಾವ್ಯವನ್ನು ಆಧಾರಿತಕ್ಕೆ ಕುರಿತಂತೆ ಆಕರ್ಷಕವಾದ ಪುಷ್ಪಗಳಲ್ಲಿ ಅರಳಿಸಲು ತೋಟಗಾರಿಕೆ ಇಲಾಖೆ ನಿರ್ಧರಿಸಲಾಗಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದು ಬಂದಿದೆ.

ಫಲ ಪುಷ್ಪ ಪ್ರದರ್ಶನಕ್ಕಾಗಿ ದೇಶ ವಿದೇಶಗಳಿಂದ ಸುಮಾರು 70 ತರಹದ 25 ಲಕ್ಷ ಹೂಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಚಳಿಗಾಲದಲ್ಲಿ ಬೆಳೆಯುವಂತಹ ಪೂಷಿಯಾ, ಅಗಪಾಂಥಸ್‌, ಸೈಕ್ಲೋಮನ್‌, ಟ್ಯೊಬಿರಸ್‌ ರೂಟೆಡ್‌ ಹಾಗೂ ಕ್ಯಾಲಾಲಿಲ್ಲ ಸೇರಿದಂತೆ ಅನೇಕ ಬಗೆಯ ಹೂಗಳನ್ನು ಪ್ರದರ್ಶನಕ್ಕಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳಲು ಬೆಂಗಳೂರು ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಪ್ರವಾಸಿಗರು ಬರಲಿದ್ದಾರೆ. ಈ ಫಲಪುಷ್ಪ ಪ್ರದರ್ಶನಕ್ಕೆ ಬರುವ ಸಾರ್ವಜನಿಕರಿಗೆ ಟಿಕೆಟ್‌ ದರ ನಿಗದಿಪಡಿಸಲಾಗಿದೆ. ಅಂತೆಯೇ ಹಿರಿಯರಿಗೆ 80 ರಿಂದ 100 ರೂ. ಮಕ್ಕಳಿಗೆ 30 ರೂ. ನಿಗದಿಪಡಿಸಲಾಗಿದ್ದು,
ಶಾಲಾ ಸಮವಸ್ತ್ರ ಧರಿಸಿ ಬರುವ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂಬ ಮಾಹಿತಿ ಅಧಿಕಾರಿಗಳು ಮೂಲಗಳು ತಿಳಿಸಿವೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

1 hour ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

2 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

2 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

2 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

2 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago