Mysore
25
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

ರೋಹಿಣಿ ಸಿಂಧೂರಿ ವಿರುದ್ಧ ಭೂ ಕಬಳಿಕೆ ಆರೋಪ; ಖ್ಯಾತ ಗಾಯಕರಿಂದ ಲೋಕಯುಕ್ತಕ್ಕೆ ದೂರು

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್‌ ಖ್ಯಾತ ಗಾಯಕ ಲಕ್ಕಿ ಅಲಿ ಗಂಭೀರ ಆರೋಪ ಮಾಡಿ, ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಬೆಂಗಳೂರಿನ ನ್ಯೂ ಯಲಹಂಕ ಟೌನ್‌ ಬಳಿ ಇರುವ ಟ್ರಸ್ಟ್‌ನ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಮಾಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ದೂರು ನೀಡಿದ್ದು, ದೂರಿನ ಪ್ರತಿಯನ್ನು ತಮ್ಮ ಟ್ವೀಟರ್‌ ಖಾತೆಯಲ್ಲಿ ಶೇರ್‌ಮಾಡಿಕೊಂಡಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್​ಗಳನ್ನು ಮಾಡಿರು ಲಕ್ಕಿ ಅಲಿ, ಈ ಬಗ್ಗೆ ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.

ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗೂ ಪತಿ ಸುಧೀರ್ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ್, ಸರ್ವೇಯರ್ ಅಧಿಕಾರಿ ಮನೋಹರ್ ಸೇರಿದಂತೆ 6 ಮಂದಿ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಅಂದಿನ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರಿಗೆ ಟ್ಯಾಗ್ ಮಾಡಿದ್ದರು. ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದು ಆ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಈಗ ಮತ್ತೆ ತಮ್ಮ ಟ್ರಸ್ಟ್‌ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೊತೆಗೆ ಹಗರಣದಲ್ಲಿ ಯಲಹಂಕ ಎಸಿಪಿ ಮಂಜುನಾಥ್, ಸರ್ವೇಯರ್ ಮನೋಹನ್ ಶಾಮೀಲು ಆಗಿರುವ ಆರೋಪ ಮಾಡಿದ್ದಾರೆ.

 

Tags:
error: Content is protected !!