ರಾಜ್ಯ

2005 ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು : ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2005ರ ಪೂರ್ವ ಅರಣ್ಯ ಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾಂತ ಕೊಚರೇಕರ, ಜಿ.ಎಂ.ಶೆಟ್ಟಿ, ಪಿ.ಟಿ.ನಾಯ್ಕ,,ಗಣೇಶ ನಾಯ್ಕ ನೇತೃತ್ವದ ಹೋರಾಟ ಸಮಿತಿಯ ನಿಯೋಗವು ಇಂದು ಜಿಲ್ಲಾ ಉಸ್ತುವಾರಿ ಸಚಿವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಅರಣ್ಯಹಕ್ಕು ಅರ್ಜಿಗಳನ್ನು ಸಾರಾ ಸಗಟು ತಿರಸ್ಕರಿಸಿದ ಪರಿಣಾಮದಿಂದ ಪ್ರಸ್ತುತ ಎದುರಾಗಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು, ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಗೊಳಿಸಲಾಗುವುದು. ಅರ್ಹರು ಭೂಮಿ ಹಕ್ಕಿನಿಂದ ವಂಚಿತರಾಗದಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

ಅರಣ್ಯ ಭೂಮಿಯಲ್ಲಿನ ಬಗರ್ ಹುಕುಂ ಸಾಗುವಳಿಗೆ ಸಂಬಂಧಿಸಿ 1980ರ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಮರುಸಮೀಕ್ಷೆ ನಡೆಸುವುದು ಸೇರಿದಂತೆ, ಅರಣ್ಯ ಹಕ್ಕುಕಾಯ್ದೆಯ ಪರಿಣಾಮಕಾರಿ ಅನುಷ್ಠಾನದಿಂದ ಜಿಲ್ಲೆಯ ಜನರಿಗೆ ಭೂಮಿಯ ಹಕ್ಕು ಕೊಡಿಸಬೇಕೆಂದು ನಿಯೋಗ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿತು. ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸರಕಾರದ ಮುಂದೆ ವಿವಿಧ ರಚನಾತ್ಮಕ ಸಲಹೆಗಳನ್ನು ನಮ್ಮ ಹೋರಾಟ ಸಮಿತಿ ಸರ್ಕಾರದ ಮುಂದೆ ಮಂಡಿಸಿತು ಎಂದು ಚಂದ್ರಕಾಂತ ಕೊಚರೇಕರ ತಿಳಿಸಿದರು.

ಇದನ್ನೂ ಓದಿ:-ನಟ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ

ನಿಯೋಗದ ಜೊತೆ ಮಾತನಾಡಿದ ಸಿದ್ದರಾಮಯ್ಯ, ಅರಣ್ಯ ಭೂಮಿ ಸಾಗುವಳಿದಾರರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು ವಸತಿ ಮತ್ತು ಜೀವನೋಪಾಯಕ್ಕೆ ಅರಣ್ಯ ಭೂಮಿಯನ್ನು ಅವಲಂಬಿಸಿರುವ ಬಡ ಜನರು ಆತಂಕ ಪಡುವ ಅಗತ್ಯವಿಲ್ಲ ಸ್ಪಷ್ಟ ಪಡಿಸಿದ್ದಾರೆ ಎಂದು ಅವರು ತಿಳಿಸಿದರು. ಅರಣ್ಯ ಭೂಮಿಯಲ್ಲಿನ ಒತ್ತುವರಿಯ ನೈಜ ಸ್ಥಿತಿಯ ಕುರಿತು ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸ್ಥಳ ತನಿಖೆ ನಡೆಸಿ ಉಪವಿಭಾಗೀಯ ಸಮಿತಿಗೆ ವರದಿ ಸಲ್ಲಿಸಬೇಕು. ಸ್ಥಳ ಮಹಜರು ದೃಢೀಕರಣ ಪತ್ರದ ದಾಖಲೆ ಪೂರೈಸುವ ಮೂಲಕ ಅರಣ್ಯವಾಸಿಗಳು ಅರಣ್ಯ ಹಕ್ಕಿನಿಂದ ವಂಚಿತರಾಗದಂತೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳವೈದ್ಯ ಉಪಸ್ಥಿತರಿದ್ದು, ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನ ಸೆಳೆಯುವಲ್ಲಿ ಸಹಕರಿಸಿದರು. ಬಳಿಕ ನಿಯೋಗ ರಾಜ್ಯದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಟಿ.ಯೋಗೇಶ ಅವರನ್ನು ಸಹ ಭೇಟಿಮಾಡಿ, ಸುಪ್ರೀಂ ಕೋರ್ಟಿಗೆ ಅರಣ್ಯವಾಸಿಗಳ ಪರ ಸರ್ಕಾರದಿಂದ ಅಗತ್ಯ ದೃಢೀಕರಣ ಸಲ್ಲಿಸುವ ಕುರಿತು ಕೋರಲಾಯಿತು. ನಿರ್ದೇಶಕರ ಸ್ಪಂದನೆ ಉತ್ತಮವಾಗಿತ್ತು. ಅವರ ಪ್ರಕಾರ ನಾವು ಮಂಡಿಸಿದ ಬೇಡಿಕೆಯನ್ನು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಪರಿಗಣಿಸಿ, ಉನ್ನತಾಧಿಕಾರ ಸಮಿತಿಯ ಸಭೆ ಕರೆದು ಸೂಕ್ತ ನಿರ್ಣಯ ತೆಗೆದುಕೊಂಡಿರುವ ವಿಚಾರವನ್ನು ನಮಗೆ ತಿಳಿಸಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

1 min ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

23 mins ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

42 mins ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

2 hours ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

2 hours ago

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

2 hours ago