ರಾಜ್ಯ

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯುತ್ತದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪರಿಸರ, ಅರಣ್ಯ ಸಂರಕ್ಷಕರಿಗೆ ಮುಖ್ಯಮಂತ್ರಿ ಪದಕ ವಿತರಿಸಿ ಮಾತನಾಡಿದರು.

ಸಾಕು ಹಸುವನ್ನು ತಿಂದಿದೆ ಎನ್ನುವ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದನ್ನು ಸಹಿಸಲು ಸಾಧ್ಯವಿಲ್ಲ. ಯಾರೇ ಅರಣ್ಯ ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲಲು ಮುಂದಾದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರು ಎಷ್ಟೇ ದೊಡ್ಡವರಾಗಿದ್ದರೂ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನು ಓದಿ : ಅರಣ್ಯ ಒತ್ತುವರಿ ತಡೆಯಲು ಅರಣ್ಯ ಸಿಬ್ಬಂದಿಗೆ ಸಚಿವ ಈಶ್ವರ ಖಂಡ್ರೆ ಕರೆ

ಮಾನವ-ವನ್ಯಜೀವಿ ಸಹಬಾಳ್ವೆಯ ಪರಿಸರ ಪೂರಕವಾದ ಆಶಯ ಮತ್ತು ಉದ್ದೇಶಕ್ಕಾಗಿ ವನ್ಯಜೀವಿ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಅರಣ್ಯ ಪರಿಸರ ಆರೋಗ್ಯಕರವಾಗಿ ವಿಸ್ತರಣೆ ಆದಷ್ಟೂ ಮನುಷ್ಯ ಪರಿಸರ ಹೆಚ್ಚು ಆರೋಗ್ಯಕರವಾಗಿರುತ್ತದೆ. ಅರಣ್ಯದ ಉಳಿವು ಭೂಮಿಯ ಉಳಿವು ಎನ್ನುವುದನ್ನು ಮರೆಯಬಾರದು ಎಂದರು.

ಆನೆ ಮತ್ತು ಹುಲಿ ಸಂಪತ್ತಿನಲ್ಲಿ ನಮ್ಮ ರಾಜ್ಯ ಮೊದಲ ಮತ್ತು ಎರಡನೇ ಸ್ಥಾನದಲ್ಲಿದೆ. ಇದರ ಜೊತೆಗೆ ಪ್ರಾಣಿ ಮತ್ತು ಮನುಷ್ಯರ ಸಂಘರ್ಷ ತಪ್ಪಿ ಸಹಬಾಳ್ವೆ ಏರ್ಪಡಬೇಕು. ಇದಕ್ಕಾಗಿ ಪ್ರಾಣಿಗಳು ಕಾಡು ಬಿಟ್ಟು ಹೊರಗೆ ಏಕೆ ಬರುತ್ತಿವೆ ಎನ್ನುವ ಬಗ್ಗೆ ಅಧ್ಯಯನಗಳು ನಡೆದು ವೈಜ್ಞಾನಿಕ ಪರಿಹಾರಗಳನ್ನು ಕಂಡುಕೊಳ್ಳಬೇಕಿದೆ ಎಂದರು.

ಹುಲಿ, ಆನೆಗಳ ಹತ್ಯೆ ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಅರಣ್ಯಾಧಿಕಾರಿಗಳು ಹೆಚ್ಚು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಹುಲಿ ಹತ್ಯೆ ಮಾಡಿದವರು ಮತ್ತು ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ದ ಎಂದು ಎಚ್ಚರಿಸಿದರು.

ದಿನೇ ದಿನೇ ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದರೆ ಮನುಷ್ಯ ಕುಲ ಉಳಿಯಲು ಸಾಧ್ಯವಿಲ್ಲ. ಆದ್ದರಿಂದ ಅರಣ್ಯದ ಉಳಿವು ಮನುಷ್ಯನ ಉಳಿವು ಎನ್ನುವುದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

5 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

5 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

5 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

5 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

7 hours ago