ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದ ಗುಡ್ಡ,
ಹಾಸನ: ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಮಳೆಯಿಂದ ಹಲವೆಡೆ ಗುಡ್ಡ ಕುಸಿಯುತ್ತಿವೆ. ಮೊನ್ನೆ(ಜು.16) ತಾನೆ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದೀಗ ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರದ ದೊಡ್ಡತಪ್ಲು ಗ್ರಾಮದಲ್ಲಿ ಮತ್ತೆ ಭೂಕುಸಿತ ಉಂಟಾಗಿದೆ.
ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಲು ಗ್ರಾಮದ ಬಳಿ ಬುಧವಾರ(ಜು.17) ತಡರಾತ್ರಿ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಗುಡ್ಡ ಕುಸಿದಿದ್ದು, ಕಾರಿನ ಮೇಲೆ ಭಾರಿ ಪ್ರಮಾಣದ ಮಣ್ಣು ಬಿದ್ದಿದೆ. ಅದರಲ್ಲಿದ್ದ ಇಬ್ಬರು ಅಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ.
ಬುಧವಾರ ಮಧ್ಯಾಹ್ನದಿಂದಲೇ ಈ ಭಾಗದಲ್ಲಿ ಭಾರಿ ಪ್ರಮಾಣದ ಗುಡ್ಡ ಕುಸಿದಿತ್ತು. ಆಗ ಕೆಲಕಾಲ ಸಂಚಾರ ನಿರ್ಭಂಧ ವಿಧಿಸಿ, ಮಣ್ಣು ತೆರವು ಮಾಡಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಹೀಗಿರುವಾಗಲೇ ಮತ್ತೆ ತಡರಾತ್ರಿ ಭಾರಿ ಪ್ರಮಾಣದ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ತುಂಬೆಲ್ಲಾ ಮಣ್ಣು ತುಂಬಿದ್ದು, ಸುತ್ತಮುತ್ತ ಎರಡು ಕಡೆಗೆ ಐದು ಕಿಮೀ ಟ್ರಾಫಿಕ್ ಜಾಮ್ ಆಗಿದೆ. ಮಣ್ಣು ತೆರವು ಕಾರ್ಯಚರಣೆ ನಡೆಯುತ್ತಿದ್ದು, ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ.
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…