ಬೆಂಗಳೂರು: ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ಇದೇ.19 ರಂದು ಚಾಲನೆ ನೀಡಲಾಗುತ್ತಿದ್ದು, ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಸದಾಶಿವನಗರದಲ್ಲಿರುವ ಡಾ.ಜಿ.ಪರಮೇಶ್ವರ್ ಅವರ ಮನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಕ್ಕ ಕಾರ್ಯಪಡೆಯ ಬಗ್ಗೆ ಚರ್ಚೆಗಳಾಗಿವೆ.
ತಾಲ್ಲೂಕು ಮಟ್ಟದಲ್ಲಿ ಈ ಕಾರ್ಯ ಪಡೆಗಳನ್ನು ರಚಿಸಲಾಗುತ್ತಿದ್ದು, ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಕಿರುಕುಳವನ್ನು ಹತ್ತಿಕ್ಕುವ ಗುರಿ ಹೊಂದಿದೆ.
ಮಹಿಳೆಯರು ಮತ್ತು ಮಕ್ಕಳು ದೌರ್ಜನ್ಯಕ್ಕೆ ತುತ್ತಾದ ಸಂದರ್ಭದಲ್ಲಿ ತತ್‍ಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಈ ಪಡೆಗಳನ್ನು ರೂಪಿಸಲಾಗಿದೆ. ಮಹಿಳಾ ಪೊಲೀಸ್ ಅಧಿಕಾರಿಯ ನೇತೃತ್ವದಲ್ಲಿ ಎನ್.ಸಿ.ಸಿ.ಯ ಕೆಡೆಟ್‍ಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಕಾರ್ಯ ಪಡೆಯಲ್ಲಿರಲ್ಲಿದ್ದಾರೆ.
ಪೊಲೀಸ್ ಇಲಾಖೆಯ ಮಾದರಿಯಲ್ಲಿ ಪ್ರತ್ಯೇಕ ಗಸ್ತು ವಾಹನಗಳನ್ನು ಈ ಪಡೆಗಾಗಿ ನಿಯೋಜಿಸಲಾಗಿದೆ. ಬಸ್ ನಿಲ್ದಾಣ, ಶಾಲಾ ಕಾಲೇಜು, ಮಾರುಕಟ್ಟೆ ಹಾಗೂ ಇತರ ಜನ ಸಂದಣಿ ಪ್ರದೇಶಗಳಲ್ಲಿ ಗಸ್ತು ವಾಹನಗಳನ್ನು ನಿಯೋಜಿಸಲಾಗುತ್ತದೆ.
ಬಾಲ್ಯ ವಿವಾಹ ತಡೆ ಹಾಗೂ ಫೋಕ್ಸೊ ಕಾಯ್ದೆಯ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾಯ್ದೆಯ ಈ ಪಡೆಯ ಮೂಲ ಉದ್ದೇಶವಾಗಿದೆ.
ಇತ್ತೀಚೆಗೆ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಕಾರ್ಯ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಿರ್ಣಯ ಕೈಗೊಂಡಿದ್ದರು. ಅದರಂತೆ ನವೆಂಬರ್ 19 ರಂದು ಅಕ್ಕ ಕಾರ್ಯಪಡೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಪೂರ್ವ ಭಾವಿಯಾಗಿ ಪೊಲೀಸ್ ಇಲಾಖೆಯ ಸಹಕಾರ ಪಡೆಯಲು ಮತ್ತು ಕಾರ್ಯಪಡೆಗಳನ್ನು ಮತ್ತಷ್ಟು ಪರಿಣಾಮಕಾರಿಯನ್ನಾಗಿಸುವ ನಿಟ್ಟಿನಲ್ಲಿ ಸಚಿವದ್ವಯರು ಇಂದು ಚರ್ಚೆ ನಡೆಸಿದ್ದಾರೆ.
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…