Mysore
20
few clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಗೂಂಡಾರಾಜ್ಯ ಸೃಷ್ಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅನೇಕ ಘಟನೆಗಳು ನಡೆಯುತ್ತಿವೆ. ರಾಜ್ಯವೇ ತಲೆತಗ್ಗಿಸುವ ಕೆಲಸವಾಗುತ್ತಿದೆ. ಆದರೂ ಆರೋಪಿಗಳನ್ನು ಬಂಧಿಸುವ ಕೆಲಸ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಹಾಗೂ ಸಿಎಂಗೆ ಹಿಡಿತವೇ ಇಲ್ಲ ಎಂದು ಕಿಡಿಕಾರಿದರು.

ಹಾವೇರಿ ಜಿಲ್ಲೆಯಲ್ಲಿ ಯುವತಿ ಸ್ವಾತಿ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಈ ಪ್ರಕರಣದ ಎಫ್‌ಐಆರ್‌ ಆದ ಬಳಿಕವೂ ತಾಯಿಗೆ ಮಾಹಿತಿ ನೀಡದೇ ಪೊಲೀಸರು ಪ್ರಕರಣ ಮುಚ್ಚಿಹಾಕಿದ್ದಾರೆ. ಈ ಲವ್‌ ಜಿಹಾದ್‌ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Tags:
error: Content is protected !!