ರಾಜ್ಯ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಬಹಳ ಚೆನ್ನಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು, ಬ್ಯಾಂಕ್‌ ದರೋಡೆಗಳು ಆಗುತ್ತಿವೆ. ಈ ಪ್ರಕರಣಗಳು ನಡೆಯುವಾಗ ಅಲ್ಲಿರುವ ಲೋಪಗಳನ್ನು ನಾವು ಗಮನಿಸಬೇಕು ಎಂದರು.

ಇನ್ನು ಬೀದರ್‌ನಲ್ಲಿ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಆವತ್ತು ಆರ್ಮ್ಡ್‌ ಗಾರ್ಡ್‌ ಇರಲಿಲ್ಲ. ಹಾಗಾಗಿ ಈ ರೀತಿ ಘಟನೆ ಸಂಭವಿಸಿದೆ. ಬ್ಯಾಂಕ್‌ ದರೋಡೆ ವೇಳೆ ಬ್ಯಾಂಕ್ ಭದ್ರತಾ ಸಿಬ್ಬಂದಿ ಇರಲಿಲ್ಲ. ಇದಕ್ಕೆ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದು ಹೇಳೋದು ಸರಿಯಲ್ಲ ಎಂದು ಹೇಳಿದರು.

ಇನ್ನು ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಎಲ್ಲೆಲ್ಲಿ ಇಂತಹ ಘಟನೆಗಳಾಗಿವೆ ಎಂದು ನಾನು ಅಂಕಿ-ಅಂಶ ಕೊಡುತ್ತೇನೆ. ಅವರ ಆಡಳಿತದ ಅವಧಿಯಲ್ಲಿ ಆಗಿರುವ ಘಟನೆಗಳನ್ನು ಮರೆತು ಬಿಟ್ಟಿದ್ದಾರೆ ಅನ್ನಿಸುತ್ತಿದೆ. ಅವರ ಕಾಲದಲ್ಲಿ ಎಷ್ಟು ಕೊಲೆಗಳಾಗಿದ್ದವು. ಎಷ್ಟು ರೇಪ್‌ ಆಗಿದ್ದವು ಎಂದು ವಿವರಣೆ ಕೊಡುತ್ತೇನೆ. ಇದೆಲ್ಲವೂ ರಾಜ್ಯದ ಜನತೆಗೆ ಗೊತ್ತಾಗಲಿ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತ

ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…

13 hours ago

ಕಾಡುಹಂದಿ ದಾಳಿ: ರೈತನಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…

13 hours ago

ಶೀಘ್ರದಲ್ಲೇ ಅಕ್ರಮ ಸೈಟ್‌ಗಳ ಪಟ್ಟಿ ಬಿಡುಗಡೆ: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮುಡಾ 50:50 ಸೈಟ್‌ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…

15 hours ago

ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಸಿದ್ಧೇಶ್ವರ ಶ್ರೀಗಳಿಂದ ಸ್ಪಷ್ಟನೆ

ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…

16 hours ago

ಬ್ಯಾಂಕ್‌ ಗ್ರಾಹಕರಿಗೆ ಗುಡ್‌ನ್ಯೂಸ್‌: ಇಂದಿನಿಂದ 3 ದಿನ ಕರೆ ನೀಡಿದ್ದ ಬ್ಯಾಂಕ್‌ ಮುಷ್ಕರ ಮುಂದೂಡಿಕೆ

ನವದೆಹಲಿ: ಬ್ಯಾಂಕ್‌ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್‌ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್‌ ಸೇವೆಗಳಲ್ಲಿ…

16 hours ago

ಎಸ್‌ಐಆರ್: ಜನಾಗ್ರಹಕ್ಕೆ ದೊರೆಯಲಿ ಮನ್ನಣೆ

ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…

20 hours ago