Mysore
27
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ನೀಡಿದ್ದಾರೆ. ಅದರ ತನಿಖೆಯಾಗುತ್ತಿದೆ. ಈ ಹಂತದಲ್ಲಿ ಯಾವುದೇ ವಿಚಾರ ಚರ್ಚಿಸುವುದಿಲ್ಲ ಎಂದರು.

ಇನ್ನು ಮುಖ್ಯಮಂತ್ರಿ ಆಪ್ತರಿಗೆ ರಕ್ಷಣೆ ಇಲ್ಲ. ಸಚಿವರ ಪುತ್ರನಿಗೆ ಪ್ರಾಣ ಬೆದರಿಕೆ ಇದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ಪ್ರಕರಣಕ್ಕೂ ಕಾನೂನು ಸುವ್ಯವಸ್ಥೆಗೂ ಸಂಬಂಧವಿಲ್ಲ ಎಂದರು.

ಇನ್ನು ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಯಾವುದೇ ವಿಚಾರಗಳಾಗಿದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈ ವಿಷಯದಲ್ಲಿ ನಾವು ಚರ್ಚೆ ಮಾಡುವುದು ಸೂಕ್ತ ಅಲ್ಲ ಎಂದರು.

Tags:
error: Content is protected !!