ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣದಲ್ಲಿ ರಾಜಣ್ಣ ದೂರು ನೀಡಿದ್ದಾರೆ. ಅದರ ತನಿಖೆಯಾಗುತ್ತಿದೆ. ಈ ಹಂತದಲ್ಲಿ ಯಾವುದೇ ವಿಚಾರ ಚರ್ಚಿಸುವುದಿಲ್ಲ ಎಂದರು.
ಇನ್ನು ಮುಖ್ಯಮಂತ್ರಿ ಆಪ್ತರಿಗೆ ರಕ್ಷಣೆ ಇಲ್ಲ. ಸಚಿವರ ಪುತ್ರನಿಗೆ ಪ್ರಾಣ ಬೆದರಿಕೆ ಇದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಹನಿಟ್ರ್ಯಾಪ್ ಪ್ರಕರಣಕ್ಕೂ ಕಾನೂನು ಸುವ್ಯವಸ್ಥೆಗೂ ಸಂಬಂಧವಿಲ್ಲ ಎಂದರು.
ಇನ್ನು ಸಚಿವ ಸಂಪುಟ ಪುನರ್‌ರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಯಾವುದೇ ವಿಚಾರಗಳಾಗಿದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈ ವಿಷಯದಲ್ಲಿ ನಾವು ಚರ್ಚೆ ಮಾಡುವುದು ಸೂಕ್ತ ಅಲ್ಲ ಎಂದರು.
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…
ಬೆಂಗಳೂರು: ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…
ಬಾಗಲಕೋಟೆ: ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು ಆಶಯದಂತೆ ಸರ್ಕಾರಿ ವೈದ್ಯಕೀಯ ಕಾಲೇಜು ಉದ್ಘಾಟಿಸುವ ಮೂಲಕ ಅವರ ಕನಸನ್ನು ನನಸು ಮಾಡಲಾಗುತ್ತಿದೆ…
ಬೆಂಗಳೂರು: ರಾಜ್ಯದಲ್ಲಿ ಗ್ಯಾಸ್ ಅಭಾವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ರಾಜಕೀಯ ಮಾಡಬಾರದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.…
ಸುಂಟಿಕೊಪ್ಪ: ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.…
ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ…