ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಬಗ್ಗೆ ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ ಕೊಲೆಗಳ ಸಂಖ್ಯೆ ಕಡಿಮೆ ಆಗಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಉತ್ತಮವಾಗಿದ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಶಸ್ತ್ರಾಸ್ತ್ರ ಸಹಿತ ಹೊಯ್ಸಳ ಗಾಡಿ ಕೊಟ್ಟು ಕ್ರಮವಹಿಸಲಾಗುತ್ತಿದೆ. ಇತ್ತೀಚೆಗೆ ಎಎಸ್‌ಐಗಳಿಗೆ ಗನ್ ಕೊಡುವ ಕೆಲಸ ಮಾಡುತ್ತಿದ್ದೇವೆ. 24 ಗಂಟೆ ಬೀಟ್ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.
ಇನ್ನು ಕಾನೂನು ಸುವ್ಯವಸ್ಥೆ ಹಾಳು ಮಾಡುವವರಿಗೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಕಂಟ್ರೋಲ್ ರೂಂಗೆ ಕರೆ ಮಾಡಿದ 9 ನಿಮಿಷಗಳಲ್ಲಿ ಪೊಲೀಸರು ರೀಚ್ ಆಗುತ್ತಾರೆ. ಮಹಿಳೆಯರ ಸುರಕ್ಷತೆಗೆ ಪಿಂಕ್ ಹೊಯ್ಸಳ ಮಾಡಿದ್ದೇವೆ ಎಂದು ಹೇಳಿದರು.





