ರಾಜ್ಯ

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ: ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂದಾಗಿನಿಂದ ಕೊಲೆಗಳ ಸಂಖ್ಯೆ ಕಡಿಮೆ ಆಗಿದೆ. ಹೀಗಾಗಿ ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಉತ್ತಮವಾಗಿದ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಶಸ್ತ್ರಾಸ್ತ್ರ ಸಹಿತ ಹೊಯ್ಸಳ ಗಾಡಿ ಕೊಟ್ಟು ಕ್ರಮವಹಿಸಲಾಗುತ್ತಿದೆ. ಇತ್ತೀಚೆಗೆ ಎಎಸ್‌ಐಗಳಿಗೆ ಗನ್‌ ಕೊಡುವ ಕೆಲಸ ಮಾಡುತ್ತಿದ್ದೇವೆ. 24 ಗಂಟೆ ಬೀಟ್‌ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.

ಇನ್ನು ಕಾನೂನು ಸುವ್ಯವಸ್ಥೆ ಹಾಳು ಮಾಡುವವರಿಗೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ಕಂಟ್ರೋಲ್‌ ರೂಂಗೆ ಕರೆ ಮಾಡಿದ 9 ನಿಮಿಷಗಳಲ್ಲಿ ಪೊಲೀಸರು ರೀಚ್‌ ಆಗುತ್ತಾರೆ. ಮಹಿಳೆಯರ ಸುರಕ್ಷತೆಗೆ ಪಿಂಕ್‌ ಹೊಯ್ಸಳ ಮಾಡಿದ್ದೇವೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

4 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

5 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

5 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

5 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

6 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

6 hours ago