ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಸಂಚಕಾರ ತಂದೊಡ್ಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಆಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಿಯಮ ಉಲ್ಲಂಘನೆಗಳ ಕುರಿತು ಹಿಂದಿನ ಅಧ್ಯಕ್ಷ ರಾಜೀವ್ ಅವರನ್ನು ಲೋಕಾಯುಕ್ತ ಸಂಸ್ಥೆಯಿಂದ ವಿಚಾರಣೆಗೊಳಪಡಿಸುವ ಪ್ರಸ್ತಾವಕ್ಕೆ ಕಾನೂನು ಇಲಾಖೆ
ಕೊನೆಗೂ ಅನುಮತಿ ನೀಡಿದೆ.
ಮುಡಾ ಮಾಜಿ ಅಧ್ಯಕ್ಷರಾಗಿದ್ದ ರಾಜೀವ್ ವಿರುದ್ದ ತನಿಖೆಗೆ ಒಳಪಡಿಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಆರು ತಿಂಗಳ ಹಿಂದೆಯೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಕೊನೆಗೆ ಸಾಕಷ್ಟು ಆಳೆದು ತೂಗಿ ತನಿಖೆಗೆ ಕಾನೂನು ಇಲಾಖೆ ಅಸ್ತು ನೀಡಿದೆ. ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ (ತಿದ್ದುಪಡಿ ಕಾಯ್ದೆ 2018) 1988ರ ಕಲಂ 17ರ ಅನ್ವಯ ರಾಜೀವ್ ಅವರ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಪಡಿಸಿದ್ದ ಬಡಾವಣೆಗಳಲ್ಲಿನ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣದಲ್ಲಿ ಈಗಾಗಲೇ ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿತ್ತು. ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುಡಾ ಮಾಜಿ ಆಯುಕ್ತ ಜಿ ಟಿ ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಇಡಿ ವಶಕ್ಕೆ ನೀಡಲಾಗಿತ್ತು.
ಇದಕ್ಕೂ ಮುನ್ನ ವರ್ಗಾವಣೆ ಮತ್ತು ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದ ದಿನೇಶ್ ಕುಮಾರ್ ಅವರನ್ನು ಬಂಧನಕ್ಕೊಳಪಡಿಸಿತ್ತು. ಈ ಸಂಬಂಧ ದಿನೇಶ್ ಕುಮಾರ್ ವಿರುದ್ಧ ಚಾರ್ಜ್‍ಶೀಟ್ ಕೂಡ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿತ್ತು.
ಮುಡಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಧಿ ನಿರ್ವಹಣೆ ಸಂಬಂಧ ತೆರೆದಿದ್ದ ಒಟ್ಟು 23 ಬ್ಯಾಂಕ್ ಖಾತೆಗಳ ನಗದು ಪುಸ್ತಕಗಳಲ್ಲಿನ ಹಲವು ನ್ಯೂನತೆಗಳನ್ನು ರಾಜ್ಯ ಲೆಕ್ಕಪತ್ರ ಮತ್ತ ಲೆಕ್ಕ ಪರಿಶೋಧನೆ ಇಲಾಖೆಯು ಪತ್ತೆ ಹಚ್ಚಿತ್ತು. ಸಕ್ಷಮ ಅನುಮೋದನೆಯಿಲ್ಲದೆಯೇ ಹಾಗೆಯೇ ಮುಡಾದಲ್ಲಿ ಚಾಲ್ತಿಯಲ್ಲಿದ್ದ 23 ಖಾತೆಗಳಲ್ಲಿ 15 ಖಾತೆಗಳಲ್ಲಿನ ಮೊತ್ತವನ್ನು ಪ್ರಾಧಿಕಾರದ ಆಂತರಿಕ ವರ್ಗಾವಣೆ ಮಾಡಲಾಗಿತ್ತು ಎಂಬುದನ್ನೂ ಸಹ ಲೆಕ್ಕ ಪರಿಶೋಧಕರು ಬಯಲು ಮಾಡಿದ್ದರು.
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ 1, 3 ಹಾಗೂ 5 ದಿನಗಳ ಅನ್‌ಲಿಮಿಟೆಡ್ ಕ್ಯೂಆರ್ ಕೋಡ್ ಪಾಸ್ ಸೇವೆ…
ಮಂಡ್ಯ: ಜಲಜೀವನ್ ಮಿಷನ್ ಯೋಜನೆಯಡಿ ತೆಗೆದುಕೊಳ್ಳಲಾದ ಕಾಮಗಾರಿಗಳ ಗುಣಮಟ್ಟ ಮತ್ತು ಕಾಮಗಾರಿಗಳ ಪ್ರಸ್ತುತ ಸ್ಥಿತಿ ಕುರಿತು ಪರಿಶೀಲನೆ ನಡೆಸಿದ ಜಿಲ್ಲಾ…
ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ”…
ಬೆಂಗಳೂರು: ಜನವರಿ.16ರಂದು ನಾನು ದೆಹಲಿಗೆ ಹೋಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಿಗ್ಗೆ ಪ್ರಯತ್ನ ವಿಫಲವಾದರೂ ಪ್ರಾರ್ಥನೆ…
ಥೈಲ್ಯಾಂಡ್‌ನ ಈಶಾನ್ಯದಲ್ಲಿ ಕ್ರೇನ್ ರೈಲಿನ ಮೇಲೆ ಬಿದ್ದು ಹಳಿತಪ್ಪಿದ ಪರಿಣಾಮ ಕನಿಷ್ಠ 22 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು…
ಹಾಸನ: ಅಂಗಡಿಯಲ್ಲಿ ವ್ಯಾಪಾರ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದಲ್ಲಿ ನಡೆದಿದೆ. ಪ್ರವೀಣ್(45)…