ರಾಜ್ಯ

ನಟ ದರ್ಶನ್‌ಗೆ ಪತ್ರದ ಮೂಲಕ ವಕೀಲರ ನೀತಿ ಪಾಠ

ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು ವಿವಾದಗಳನ್ನು ಮಾಡಿಕೊಳ್ಳುತ್ತಲೇ ಬಂದಿದ್ದಾರೆ.

ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿದ್ದು, ಅಲ್ಲಿ ಸ್ವತಃ ಅವರ ಪರ ನ್ಯಾಯಾಲಯದಲ್ಲಿ ವಾದ ಮಾಡುವ ವಕೀಲರೇ ಪತ್ರದ ಮುಖಾಂತರ ಜೈಲಿನಲ್ಲಿ ಸುಮ್ಮನಿರುವಂತೆ ಶಿಸ್ತಿನ ಪಾಠ ಮಾಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾಗ ಸೀಗರೇಟ್‌ ಸೇದುತ್ತಿರುವುದು ಹಾಗೂ ಕಾಫಿ ಕುಡಿಯುತ್ತಿರುವ ಭಾವಚಿತ್ರ ಭಾರಿ ಮಟ್ಟದಲ್ಲಿ ವೈರಲ್‌ ಆಗಿತ್ತು. ಈ ಫೋಟೋಗಳು ವೈರಲ್‌ ಆಗುತ್ತಿದ್ದಂತೆ ದರ್ಶನ್‌ ಅವರನ್ನು ಬೆಂಗಳೂರಿನಿಂದ ಬಳ್ಳಾರಿಗೆ ಹಸ್ತಾಂತರ ಮಾಡುವಂತೆ ಮಾಡಿಕೊಂಡಿದ್ದರು. ಈ ಮಧ್ಯೆ ಬಳ್ಳಾರಿಯಲ್ಲಿಯೂ ಸಹ ಮಾಧ್ಯಮಗಳಿಗೆ ಅಶ್ಲೀಲ ಸನ್ನೆ ತೋರಿಸುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು. ಹೀಗಾಗಿ ದರ್ಶನ್‌ ಅವರ ಪರ ನ್ಯಾಯಾಲಯದಲ್ಲಿ ವಾದ ಮಾಡುವ ವಕೀಲರಿಂದಲೇ ದುರ್ನಡತೆಯನ್ನು ಸರಿಪಡಿಸಿಕೊಳ್ಳುವಂತೆ ಕಿವಿಮಾತು ಬಂದಿದೆ ಎಂದು ಹೇಳಲಾಗಿದೆ.

ಕೆಲವು ದಿನಗಳ ಹಿಂದೆ ಅಷ್ಟೇ ರೇಣುಕಾ ಸ್ವಾಮಿ ಕೊಲೆ ಕೇಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಸೇರಿದಂತೆ 17 ಜನ ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿತ್ತು. ಈ ಚಾರ್ಜ್‌ಶಿಟ್‌ನಲ್ಲಿ ಪ್ರಕರಣದ ಅನೇಕ ವಿಚಾರಗಳು ಉಲ್ಲೇಖವಾಗಿದ್ದವು. ಹೀಗಿದ್ದರೂ ಇಲ್ಲಿಯವರೆಗೂ ದರ್ಶನ್‌ ಅವರ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಸಲ್ಲಿಸಿರಲಿಲ್ಲ. ಒಂದು ವೇಳೆ ಅವರ ಪರ ಜಾಮೀನು ಸಲ್ಲಿಕೆ ಮಾಡಿದರೆ, ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖವಾಗಿರುವ ವಿಷಯಗಳು ಹಾಗೂ ವಿವಾದತ್ಮಕ ವಿಚಾರಗಳು ಹೈಲೈಟ್‌ ಆಗಿ ಜಾಮೀನಿಗೆ ತೊಂದರೆಯಾಗುತ್ತವೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಹಿಂದಿನಂತೆಯೇ ವಿವಾದತ್ಮಕ ವಿಚಾರಗಳನ್ನು ಸೃಷ್ಠಿಕೊಂಡು ಪದೇ ಪದೇ ಕಿರಿಕ್‌ ಮಾಡಿಕೊಂಡರೆ ಜಾಮೀನಿಗೆ ತೊಂದರೆಯಾಗುತ್ತದೆ. ಅಲ್ಲದೆ ಈ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಮಸ್ಯೆಯಾಗುತ್ತದೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ. ಈ ಪತ್ರವನ್ನು ಜೈಲು ಸಿಬ್ಬಂದಿಯೂ ದರ್ಶನ್‌ಗೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

4 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

4 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

4 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

4 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

4 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

4 hours ago