Mysore
21
mist

Social Media

ಗುರುವಾರ, 29 ಜನವರಿ 2026
Light
Dark

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

opposite partys drama has been revealed in front of peoples

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿಗಳು, ಆಯುಕ್ತರು, ಮುಡಾ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದರು.

ಇದನ್ನು ಓದಿ: ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

300 ಎಕರೆ ಜಮೀನನ್ನು ಗುರುತಿಸಲಾಗಿದ್ದು, ನಿವೇಶನವನ್ನು ಸಾರ್ವಜನಿಕರಿಗೆ ಆದ್ಯತೆಗೆ ಅನುಗುಣವಾಗಿ ವಿತರಿಸುತ್ತೇವೆ ಎಂದು ತಿಳಿಸಿದರು.

ಗೃಹ ನಿರ್ಮಾಣದ ನಿವೇಶನಗಳನ್ನು ನೀಡಬೇಕೆಂಬ ಬೇಡಿಕೆ ಇದೆ. ಸೂಕ್ತವಾದ ಜಾಗವನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೆವು. ಇದರಿಂದ ಈಗ 300 ಎಕರೆ ಜಮೀನು ಗುರುತಿಸಿದ್ದಾರೆ. ಇದನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ವಿತರಣೆ ಮಾಡುತ್ತೇವೆ. ಎಲ್ಲವೂ ಪಾರದರ್ಶಕವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ನಿವೇಶನಗಳನ್ನು ಮನಸೋ ಇಚ್ಛೆ ವಿತರಿಸಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ವಿತರಣೆ ಮಾಡುತ್ತೇವೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಿಗಳ ಕಾಯ್ದೆ 1987ರ ನಿಯಮಗಳ ಪ್ರಕಾರ ನಿಯಮ 3ರ ಅನ್ವಯ ಪ್ರಾಧಿಕಾರವು ಅಭಿವೃದ್ದಿಪಡಿಸುವ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ವೆಬ್‍ಸೈಟ್ ಮತ್ತು ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತೇವೆ ಎಂದರು.

Tags:
error: Content is protected !!