opposite partys drama has been revealed in front of peoples
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ವಿತರಣೆ ಮಾಡಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಸದಸ್ಯ ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿಗಳು, ಆಯುಕ್ತರು, ಮುಡಾ ಆಯುಕ್ತರು ಸೇರಿದಂತೆ ವಿವಿಧ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ ಎಂದರು.
ಇದನ್ನು ಓದಿ: ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ
300 ಎಕರೆ ಜಮೀನನ್ನು ಗುರುತಿಸಲಾಗಿದ್ದು, ನಿವೇಶನವನ್ನು ಸಾರ್ವಜನಿಕರಿಗೆ ಆದ್ಯತೆಗೆ ಅನುಗುಣವಾಗಿ ವಿತರಿಸುತ್ತೇವೆ ಎಂದು ತಿಳಿಸಿದರು.
ಗೃಹ ನಿರ್ಮಾಣದ ನಿವೇಶನಗಳನ್ನು ನೀಡಬೇಕೆಂಬ ಬೇಡಿಕೆ ಇದೆ. ಸೂಕ್ತವಾದ ಜಾಗವನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೆವು. ಇದರಿಂದ ಈಗ 300 ಎಕರೆ ಜಮೀನು ಗುರುತಿಸಿದ್ದಾರೆ. ಇದನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ ವಿತರಣೆ ಮಾಡುತ್ತೇವೆ. ಎಲ್ಲವೂ ಪಾರದರ್ಶಕವಾಗಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
ನಿವೇಶನಗಳನ್ನು ಮನಸೋ ಇಚ್ಛೆ ವಿತರಿಸಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ವಿತರಣೆ ಮಾಡುತ್ತೇವೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಿಗಳ ಕಾಯ್ದೆ 1987ರ ನಿಯಮಗಳ ಪ್ರಕಾರ ನಿಯಮ 3ರ ಅನ್ವಯ ಪ್ರಾಧಿಕಾರವು ಅಭಿವೃದ್ದಿಪಡಿಸುವ ಬಡಾವಣೆಯಲ್ಲಿ ಲಭ್ಯವಿರುವ ನಿವೇಶನಗಳನ್ನು ವೆಬ್‍ಸೈಟ್ ಮತ್ತು ಪತ್ರಿಕೆಗಳಲ್ಲಿ ಜಾಹಿರಾತು ನೀಡಿ ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತೇವೆ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…