ಹಾಸನ: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜಲ್ಯಗಳ ವಿಡಿಯೋ ಪ್ರಕರಣಗಳ ಬಗ್ಗೆ, ಪೆನ್ ಡ್ರೈವ್ ಲೀಕ್ ಮಾಡಿದ್ದರು ಯಾರು ಎಂಬುದನ್ನು ಹಾಸನದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಬಹಿರಂಗಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ದೇವರಾಜೇಗೌಡ, ಪ್ರಜ್ವಲ್ ಅಶ್ಲೀಲ ವಿಡಿಯೋ ವಿಚಾರ 2023 ರಲ್ಲೇ ನನ್ನ ಬಳಿ ಬಂದಿತ್ತು. ಈಗ ಪೆನ್‌ಡ್ರೈವ್‌ನಲ್ಲಿನ ವಿಡಿಯೋಗಳು ಬಹಿರಂಗವಾಗಿರುವುದರ ಹಿಂದೆ ನನ್ನ ಪಾತ್ರ ಇಲ್ಲ. ಆದರೆ ಪ್ರಜ್ವಲ್ ಈ ಬಗ್ಗೆ ನ್ಯಾಯಾಲಯದಲ್ಲಿ ಸ್ಟೇ ಪಡೆದುಕೊಂಡಿದ್ದರು. ಆ ಪ್ರಕರಣದಲ್ಲಿ ಪ್ರಜ್ವಲ್ ಕಾರು ಚಾಲಕ ಕಾರ್ತಿಕ್ 86ನೇ ಪ್ರತಿವಾದಿಯಾಗಿದ್ದರು. ಆತ ನನ್ನ ಬಳಿ ಬಂದು ವಕಾಲತ್ತು ವಹಿಸುವಂತೆ ಮನವಿ ಮಾಡಿದ್ದ, ಆ ವೇಳೆ ಕಕ್ಷಿದಾರನ ಪರವಾಗಿ ವಾದ ಮಂಡಿಸಬೇಕಾಗಿದ್ದರಿಂದ ಪೆನ್‌ಡ್ರೈವ್‌ನಲ್ಲಿ ಏನಿದೆ ಎಂದು ಕೇಳಿದ್ದೆ. ಆವಗಲೇ ನಾನು ಆ ವಿಡಿಯೋಗಳನ್ನು ನೋಡಿದ್ದು ಎಂದು ನಡೆದ ಘಟನೆ ಬಗ್ಗೆ ವಿವರಿಸಿದರು.
ಈ ಘಟನೆಗೆ ಸಂಬಂಧಿಸಿದಂತೆ ವಿಡಿಯೋ ಯಾರ ಯಾರ ಬಳಿ ಇದೆ ಎಂದು ನಾನು ಕಾರ್ತಿಕ್ ನನ್ನು ಕೇಳಿದ್ದಾಗ, ಅದನ್ನು ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಸೇರಿ ಕೆಲ ಕಾಂಗ್ರೆಸ್ ನಾಯಕರಿಗೆ ಕಳುಹಿಸಿದ್ದೆ ಎಂದು ಹೇಳಿದ್ದ ಎಂದರು.
ಈ ವಿಚಾರವಾಗಿ ಪ್ರಧಾನ ಮೋದಿ ಹಾಗೂ ಅಮಿತ್ ಶಾ ಅವರಿಗೂ ಪತ್ರ ಬರೆದು ಇ-ಮೇಲ್ ಮಾಡಿದ್ದೆ, ಆದ್ರೆ ಇ-ಮೇಲ್ ಡೆಲಿವರಿ ಆಗಲಿಲ್ಲ. ನಂತರ ರಾಜ್ಯ ಬಿಜೆಪಿ ಅಧ್ಯಕ್ಷ ವಿಜೇಯೇಂದ್ರ ಅವರಿಗೂ ವಿಡಿಯೋ ಬಗ್ಗೆ ಪತ್ರ ಬರೆದು ಕಳುಹಿಸಿದ್ದೆ. ಆದರೆ ಅವರಿಗೂ ಪತ್ರ ತಲುಪಲಿಲ್ಲ ಎಂಬುದಾಗಿ ಬಿಜೆಪಿ ಮುಖಂಡ ದೇವರಾಜೇಗೌಡ ತಿಳಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…