ಬೆಂಗಳೂರು : ವಾರಾಂತ್ಯದ ಬಳಿಕ ಇಂದು ವಿಧಾನಮಂಡಲ ಕಾರ್ಯಕಲಾಪಗಳು ಶುರುವಾದ ಕೂಡಲೇ ವಿರೋಧ ಪಕ್ಷದ ನಾಯಕರು ಶುಕ್ರವಾರ ಪಟ್ಟನ್ನು ಮುಂದುವರೆಸಿ ಸಭಾತ್ಯಾಗ ಮಾಡಿದರು.
ಸದನದಲ್ಲಿ ಇಂದು ನಡೆಯಬೇಕಿರುವ ಕಲಾಪಗಳ ಬಗ್ಗೆ ಸ್ಪೀಕರ್ ಯುಟಿ ಖಾದರ್ ವಿವರಣೆ ನೀಡಿದ ಬಳಿಕ ಎದ್ದುನಿಂತು ಮಾತನಾಡಿದ ವಿರೋಧ ಪಕ್ಷದ ನಾಯಕ ಅಶೋಕ್, ವಾಲ್ಮೀಕಿ ನಿಗಮದ ಹಗರಣವನ್ನು ಪ್ರಸ್ತಾಪಿಸಿ, ಸಿಎಂ ಸಿದ್ದರಾಮಯ್ಯ ನವರು ಸಮಂಜಸ ಉತ್ತರ ನೀಡಿಲ್ಲ. ಅವರು ಹಗರಣ ಬಗ್ಗೆ ಮಾತಾಡುವ ಬದಲು ಬಿಜೆಪಿ ಅಧೀಕಾರಾವಧಿಯಲ್ಲಿ ನಡೆದ ಹಗರಣಗಳ ಬಗ್ಗೆ ಮಾತನಾಡಿದರು. ಇದೊಂದು ದೊಡ್ಡ ಹಗರಣವಾಗಿದ್ದು,ಸಂಬಂಧಪಟ್ಟ ಸಚಿವರಯ ರಾಜೀನಾಮೆ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ನಾವು ಹೋರಾಟ ಮುಂದುವರೆಸುತ್ತೇವೆ ಎಂದು ಹೇಳಿದರು.
ಇನ್ನು ಸಿಎಂ ರಾಜೀನಾಮೆ ನೀಡಬೇಕು ಎಂದು ಹೇಳುತ್ತಿದ್ದಂತೆ ಕಾಂಗ್ರೆಸ್ ಶಾಸಕರಾದ ಕೋನರೆಡ್ಡಿ ಮತ್ತು ನಯನಾ ಮೋಟಮ್ಮ ಇಬ್ಬರು ಕೆರಳಿದರು. ಅವರಿಬ್ಬರ ಮಾತುಗಳ ನಡುವೆ ಅಶೋಕ್ ನೇತೃತ್ವದ ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದರು.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…