ಬೆಂಗಳೂರು: ನಾಯಕತ್ವ ಬದಲಾವಣೆ ಎಂಬುದು ಕೇವಲ ರಾಜಕೀಯ ಪ್ರಹಸನವಷ್ಟೇ. ನನಗೆ ಆ ರೀತಿಯ ಮತ್ತೊಂದು ಡ್ರಾಮಾ ಕಂಪನಿ ತೆರೆಯಲು ಇಷ್ಟವಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಗತ್ಯವಾದ ವಿಶ್ಲೇಷಣೆಗಳು ನಡೆಯುತ್ತದೆ. ಅದಕ್ಕಾಗಿಯೇ ಇಂತಹ ಚರ್ಚೆಗಳು ಪದೇಪದೇ ವರದಿಯಾಗುತ್ತಿವೆ. ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದೆಲ್ಲವೂ ಕಪೋಲ ಕಲ್ಪಿತ. ನಾನು ಅದೇ ರೀತಿಯ ಹೇಳಿಕೆಗಳನ್ನು ನೀಡಲು ಇಷ್ಟಪಡುವುದಿಲ್ಲ ಎಂದರು.
ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಅಭಿಪ್ರಾಯವನ್ನು ಗೌರವಿಸುವುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿರುತ್ತದೆ. ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.





