ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನಾಯಕರು ಹೇಳಿದಂತೆ ನಡೆದುಕೊಳ್ಳುತ್ತೇವೆ. ಸ್ಥಳೀಯ ನಾಯಕರೇ ಗೊಂದಲಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದ ಎಲ್ಲಾ ನಾಯಕರು ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದಿದ್ದಾರೆ. ಹೀಗಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಹೇಳಿದಂತೆ ನಾವೆಲ್ಲ ಕೇಳುತ್ತೇವೆ ಎಂದಿದ್ದಾರೆ.
ಇದನ್ನು ಓದಿ: ಕಾಂಗ್ರೆಸ್ ಹೈಕಮಾಂಡ್ ಯಾರು ಅನ್ನೋದೆ ಗೊತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
ರಾಜ್ಯದಲ್ಲಿ ಯಾವುದೇ ಗೊಂದಲಗಳಿಲ್ಲ. ಕರ್ನಾಟಕ ಶಾಂತವಾಗಿದೆ. ಈ ಬಾರಿ ಹಲವು ಕಡೆ ಉತ್ತಮ ಮಳೆ ಮತ್ತು ಬೆಳೆಯಾಗಿದೆ. ಒಳ್ಳೆಯ ಚಳಿಯ ವಾತಾವರಣ ಇದೆ. ಮುಂದಿನ ದಿನಗಳಲ್ಲಿ ಬೇಸಿಗೆಯಲ್ಲಿ ಭರ್ಜರಿ ಬಿಸಿಲು ಬರಬಹುದು. ಎಲ್ಲರಿಗೂ ಉತ್ತಮ ವಾತಾವರಣ ಇರುವ ರಾಜ್ಯ ಎಂದರೆ ಅದು ಕರ್ನಾಟಕ ಎಂದು ಹೇಳಿದರು.
ಮಾಜಿ ಸಚಿವ ಕೆ.ಎನ್.ರಾಜಣ್ಣ ಪಕ್ಷದ ಹಿರಿಯ ನಾಯಕರು. ಉಪಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವುದರಲ್ಲಿ ಅಂತ ವ್ಯತ್ಯಾಸಗಳೇನು ಇಲ್ಲ ಎಂದರು.





