ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ ರೈತರ ಗೋಳು ಹೇಳತೀರದು, ಆದರೆ ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ರೈತರು ನೆರೆಯಿಂದ ಕಂಗಾಲಾಗಿದ್ದಾರೆ. ಹಸಿರು ಬರ ಘೋಷಣೆ ಮಾಡಿ, ಎಕರೆಗೆ 25,000 ರೂಪಾಯಿ ಪರಿಹಾರ ಕೊಡಿ. ಸಾಲ ಮನ್ನಾ ಮಾಡಿ ಎಂದು ಅನ್ನದಾತರು ಬೀದಿಗಿಳಿದು ಪ್ರತಿಭಟನೆ ಹಾಗೂ ಬಂದ್ ಮಾಡುತ್ತಿದ್ದಾರೆ.
ಇದನ್ನು ಓದಿ: ನಾವೇನು ಕದ್ದು ಮುಚ್ಚಿ ಆರ್‌ಎಸ್‌ಎಸ್ ಶಾಖೆ ನಡೆಸುತ್ತಿಲ್ಲ: ಶಾಸಕ ಶ್ರೀವತ್ಸ
ಆದರೆ ಇಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರ್‌ಎಸ್‌ಎಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕಾಲಹರಣ ಮಾಡುತ್ತಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರೇ, ಆರ್‌ಎಸ್‌ಎಸ್ ನಿಷೇಧ ಮಾಡುವ ನಿಮ್ಮ ಗೀಳು ಬಿಡಿ. ಈ ಕೂಡಲೇ ಮುಖ್ಯಮಂತ್ರಿಗಳ ಮನವೊಲಿಸಿ ನೆರೆ ಪೀಡಿತ ಪ್ರದೇಶಗಳಲ್ಲಿ ಹಸಿರು ಬರ ಘೋಷಣೆ ಮಾಡಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ. ಜನ ನಿಮಗೆ ಅಧಿಕಾರ ಕೊಟ್ಟಿರೋದು ಬರೀ ರಾಜಕಾರಣ ಮಾಡೋದಕ್ಕೆ ಅಲ್ಲ. ಆರ್‌ಎಸ್‌ಎಸ್ ಬಗ್ಗೆ ನಿಮ್ಮ ಖಯಾಲಿ ಬಿಟ್ಟು ನಿಮ್ಮ ಜವಾಬ್ದಾರಿ ನಿರ್ವಹಿಸಿ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…