ರಾಜ್ಯ

ಉಪನ್ಯಾಸಕರಿಂದಲೇ ವಿದ್ಯಾರ್ಥಿ ಮೇಲೆ ನಿರಂತರ ಅತ್ಯಾಚಾರ : ಮೂವರ ಬಂಧನ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು ಗುರುತಿಸಲಾಗಿದೆ.

ಉಪನ್ಯಾಸಕರನ್ನು ಎದುರಿಸಲು ಸಾಧ್ಯವಾಗದೆ ಆರಂಭದಲ್ಲಿ ಸುಮ್ಮನಿದ್ದ ವಿದ್ಯಾರ್ಥಿನಿ, ನಂತರ ಸಮಸ್ಯೆ ಹೆಚ್ಚಾಗಲು ಆರಂಭವಾದಾಗ ಕೃತ್ಯದ ಬಗ್ಗೆ ಪೋಷಕರ ಬಳಿ ಹೇಳಿಕೊಂಡಿದ್ದಾಳೆ. ಪೊಷಕರು ಆಕೆಯನ್ನು ಮಹಿಳಾ ಆಯೋಗಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಆಕೆಗೆ ಕೌನ್ಸೆಲಿಂಗ್ ಮಾಡಿ ಪೊಲೀಸರಿಗೆ ದೂರು ಕೊಡಿಸಿದ್ದಾರೆ.

ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಮಾರತಹಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಉಪನ್ಯಾಸಕರು ಈ ಹಿಂದೆಯೂ ಕೆಲವು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿರುವ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಯತ್ತಿದೆ.

ನೋಟ್ಸ್ ನೀಡುವ ನೆಪದಲ್ಲಿ ಕೃತ್ಯ: ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಹತ್ತಿರವಾಗಿದ್ದ. ಬಳಿಕ ಹಂತ ಹಂತವಾಗಿ ಚಾಟ್ ಮಾಡುವುದು, ನೋಟ್ಸ್ ನೀಡುವುದು ಮಾಡಿದ್ದ. ಹಾಗೆಯೇ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ ಉಪನ್ಯಾಸಕ, ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ. ಅಷ್ಟೇ ಅಲ್ಲದೆ, ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ.

ಮತ್ತೊಬ್ಬ ಉಪನ್ಯಾಸಕನಿಂದ ಬ್ಲ್ಯಾಕ್‌ಮೇಲ್: ಉಪನ್ಯಾಸಕ ನರೇಂದ್ರ ದುಷ್ಕತ್ಯ ಎಸಗಿದ ಬಳಿಕ ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಸಹ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಆ ಸಂದರ್ಭದಲ್ಲಿ ಆಕೆ ವಿರೋಧ ವ್ಯಕ್ತಪಡಿಸಿದ್ದಳು. ಆಗ, ‘ನೀನು ನರೇಂದ್ರನ ಜೊತೆಗೆ ಇರುವ ಫೋಟೊ ಹಾಗೂ ವಿಡಿಯೋ ತನ್ನ ಬಳಿ ಇದೆ. ಅದನ್ನು ಕಾಲೇಜಿನಲ್ಲಿ ಎಲ್ಲರಿಗೂ ಗೊತ್ತಾಗುವಂತೆ ಮಾಡುವೆ’ ಎಂದು ಬ್ಲ್ಯಾಕ್‌ಮೇಲ್ ಮಾಡಿದ್ದ ಸಂದೀಪ್, ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

ಸ್ನೇಹಿತನಿಂದಲೂ ಅತ್ಯಾಚಾರ: ವಿದ್ಯಾರ್ಥಿನಿ ಮೇಲೆ ಸಂದೀಪ್ ಅತ್ಯಾಚಾರ ಎಸಗಿದ ರೂಮ್ ಅನೂಪ್ ಎಂಬಾತನದ್ದಾಗಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ರೂಮ್‌ಗೆ ಬಂದಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನನ್ನ ರೂಮ್‌ನಲ್ಲಿ ಸಿಸಿಟಿವಿ ಇದೆ’ ಎಂದು ಬೆದರಿಕೆ ಹಾಕಿದ್ದ. ಬಳಿಕ ಆತನಿಂದಲೂ ಯುವತಿ ಮೇಲೆ ಅತ್ಯಾಚಾರ ನಡೆದಿದೆ.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

5 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

5 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

6 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

7 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

7 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

10 hours ago