ಬೆಂಗಳೂರು : ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿವಾದಾತ್ಮಕ ಹೇಳಿಕೆಗೆ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಸಂಸದ ಅನಂತಕುಮಾರ್ ಹೆಗ್ಡೆ ಕೇಂದ್ರ ಸಚಿವರಾಗಿದ್ದ ಅವರು ಜವಾಬ್ದಾರಿಯಿಂದ ಮಾತನಾಡಬೇಕು. ಅವರ ಈ ಹೇಳಿಕೆಯನ್ನು ಯಾರು ಒಪ್ಪುವುದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸುವಂತೆ ನಾನೇನು ಪೊಲೀಸರಿಗೆ ಸೂಚನೆ ನೀಡಿಲ್ಲ. ಅವರಿಗೆ ಅವರ ಕೆಲಸ ಏನೆಂಬುದು ಗೊತ್ತಿದೆ, ಅದನ್ನು ಪೊಲೀಸರು ಮಾಡುತ್ತಾರೆ. ಅನಂತ್ ಕುಮಾರ್ ವಿರುದ್ಧ ಕಾನೂನು ಕ್ರಮ ಪೊಲೀಸರು ಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ಹೇಳಿದರು.
ಶಾಂತಿ ಕದಡುವ ರೀತಿಯಲ್ಲಿ ಮಾತನಾಡುವುದು ಸರಿಯೇ? ಈ ರೀತಿಯ ಪ್ರಚೋದನಾಕಾರಿ ಹೇಳಿಕೆಯಿಂದ ಅನಾಹುತ ನಡೆದರೆ ಯಾರು ಹೊಣೆ. ಇವರಿಗೆ ಯಾರು ಪ್ರೇರೇಪಿಸಿದ್ದಾರೋ ಗೊತ್ತಿಲ್ಲ. ಏನಾದರೂ ಅಹಿತಕರ ಘಟನೆ ನಡೆದರೇ ಅನಂತ್‌ಕುಮಾರ್ ಅವರೇ ಜವಾಬ್ದಾರರಾಗಿರುತ್ತಾರೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವಹೇಳಕಾರಿ ಹೇಳಿಕೆ, ಪ್ರಚೋದಕಾರಿಯಾಗಿ ಮಾತನಾಡುವುದು, ಬೇರೆಯವರನ್ನು ನಿಂದಿಸಿ ಮಾತನಾಡುವುದನ್ನು ನಾವು ಸಹ ಗಮನಿಸುತ್ತಿದ್ದೇವೆ ಎಂದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ ಬಗ್ಗೆ ಮಾತನಾಡಿ, ಅದು ಅವರವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್…
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್‍ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್‌ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…