ಬೆಂಗಳೂರು : ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದಲ್ಲಿ ಚಿನ್ನದ ಪಳ್ಳಿಯೂ ಆಗಲಿದೆ ಎಂದು ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಯ ವಿವಾದಾತ್ಮಕ ಹೇಳಿಕೆಗೆ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ಸಂಸದ ಅನಂತಕುಮಾರ್ ಹೆಗ್ಡೆ ಕೇಂದ್ರ ಸಚಿವರಾಗಿದ್ದ ಅವರು ಜವಾಬ್ದಾರಿಯಿಂದ ಮಾತನಾಡಬೇಕು. ಅವರ ಈ ಹೇಳಿಕೆಯನ್ನು ಯಾರು ಒಪ್ಪುವುದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸುವಂತೆ ನಾನೇನು ಪೊಲೀಸರಿಗೆ ಸೂಚನೆ ನೀಡಿಲ್ಲ. ಅವರಿಗೆ ಅವರ ಕೆಲಸ ಏನೆಂಬುದು ಗೊತ್ತಿದೆ, ಅದನ್ನು ಪೊಲೀಸರು ಮಾಡುತ್ತಾರೆ. ಅನಂತ್ ಕುಮಾರ್ ವಿರುದ್ಧ ಕಾನೂನು ಕ್ರಮ ಪೊಲೀಸರು ಕೈಗೊಳ್ಳುತ್ತಾರೆ ಎಂದು ಗೃಹ ಸಚಿವರು ಹೇಳಿದರು.
ಶಾಂತಿ ಕದಡುವ ರೀತಿಯಲ್ಲಿ ಮಾತನಾಡುವುದು ಸರಿಯೇ? ಈ ರೀತಿಯ ಪ್ರಚೋದನಾಕಾರಿ ಹೇಳಿಕೆಯಿಂದ ಅನಾಹುತ ನಡೆದರೆ ಯಾರು ಹೊಣೆ. ಇವರಿಗೆ ಯಾರು ಪ್ರೇರೇಪಿಸಿದ್ದಾರೋ ಗೊತ್ತಿಲ್ಲ. ಏನಾದರೂ ಅಹಿತಕರ ಘಟನೆ ನಡೆದರೇ ಅನಂತ್‌ಕುಮಾರ್ ಅವರೇ ಜವಾಬ್ದಾರರಾಗಿರುತ್ತಾರೆ ಎಂದು ತಿಳಿಸಿದರು.
ಕಳೆದ ಮೂರು ವರ್ಷಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಅವಹೇಳಕಾರಿ ಹೇಳಿಕೆ, ಪ್ರಚೋದಕಾರಿಯಾಗಿ ಮಾತನಾಡುವುದು, ಬೇರೆಯವರನ್ನು ನಿಂದಿಸಿ ಮಾತನಾಡುವುದನ್ನು ನಾವು ಸಹ ಗಮನಿಸುತ್ತಿದ್ದೇವೆ ಎಂದರು.
ಇನ್ನು ಸಿಎಂ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ ಬಗ್ಗೆ ಮಾತನಾಡಿ, ಅದು ಅವರವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…