Mysore
24
haze

Social Media

ಶನಿವಾರ, 27 ಡಿಸೆಂಬರ್ 2025
Light
Dark

ಸರ್ಕಾರದ ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ: ಹೆಚ್‌ಡಿಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರಕ್ಕೆ ನಾನೇ ಟಾರ್ಗೆಟ್‌, ನನ್ನ ಬಿಟ್ಟರೆ ಯಾರು ಇಲ್ಲ. ಸರ್ಕಾರದ ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 40 ವರ್ಷಗಳ ಹಿಂದೆ ಖರೀದಿ ಮಾಡಿದ್ದ ಭೂಮಿ ಅದು. ಭೂಮಿ ಸೇರಿದಂತೆ ಯಾವ ಅಕ್ರಮವನ್ನು ನಾನು ಮಾಡಿಲ್ಲ. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್‌ ನೀಡಬೇಕು. ಆದರೆ, ನನಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಸರ್ಕಾರದ ಈ ಷಡ್ಯಂತ್ರದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದರು.

40 ವರ್ಷದ ಹಿಂದೆ ಖರೀದಿ ಮಾಡಿದ ಭೂಮಿಗೆ, ತನಿಖೆ ನಡೆಯುತ್ತಲೇ ಇದೆ. ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನನ್ನ ಪರಿಸ್ಥಿತಿಯೇ ಹೀಗಾದರೆ, ಜನರ ಪರಸ್ಥಿತಿಯ ಬಗ್ಗೆ ಚಿಂತಿಸಿದರೆ ಭಯವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

Tags:
error: Content is protected !!