ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್, ನನ್ನ ಬಿಟ್ಟರೆ ಯಾರು ಇಲ್ಲ. ಸರ್ಕಾರದ ಷಡ್ಯಂತ್ರದ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 40 ವರ್ಷಗಳ ಹಿಂದೆ ಖರೀದಿ ಮಾಡಿದ್ದ ಭೂಮಿ ಅದು. ಭೂಮಿ ಸೇರಿದಂತೆ ಯಾವ ಅಕ್ರಮವನ್ನು ನಾನು ಮಾಡಿಲ್ಲ. ಒಬ್ಬ ಸಾಮಾನ್ಯ ಪ್ರಜೆಗೆ ಯಾವುದೇ ತೆರವು ಮಾಡಬೇಕು ಎಂದರೂ ಕಾನೂನು ಪ್ರಕಾರ ಹದಿನೈದು ದಿನಗಳ ಮೊದಲೇ ನೋಟಿಸ್ ನೀಡಬೇಕು. ಆದರೆ, ನನಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಸರ್ಕಾರದ ಈ ಷಡ್ಯಂತ್ರದ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದರು.
40 ವರ್ಷದ ಹಿಂದೆ ಖರೀದಿ ಮಾಡಿದ ಭೂಮಿಗೆ, ತನಿಖೆ ನಡೆಯುತ್ತಲೇ ಇದೆ. ಇದನ್ನೆಲ್ಲಾ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನನ್ನ ಪರಿಸ್ಥಿತಿಯೇ ಹೀಗಾದರೆ, ಜನರ ಪರಸ್ಥಿತಿಯ ಬಗ್ಗೆ ಚಿಂತಿಸಿದರೆ ಭಯವಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…