Darshan
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ನಟ ದರ್ಶನ್ ಕ್ಯಾರಂಟೈನ್ ಸೆಲ್ ಬಗ್ಗೆ ಕಾನೂನು ಸೇವೆಗಳ ಪ್ರಾಧಿಕಾರ ಕೋರ್ಟ್‌ಗೆ ವರದಿ ಸಲ್ಲಿಸಿದೆ.
ಬೆಂಗಳೂರಿನ 57ನೇ ಸಿಸಿಎಚ್ ಕೋರ್ಟ್‌ಗೆ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿದೆ. ನಟ ದರ್ಶನ್‌ಗೆ ಬೆನ್ನು ನೋವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕೆಲ ಸೌಲಭ್ಯಗಳನ್ನು ಒದಗಿಸುವಂತೆ ಕೋರ್ಟ್ ಆದೇಶ ನೀಡಿತ್ತು.
ಕೋರ್ಟ್ ಆದೇಶ ನೀಡಿದರೂ ಜೈಲಾಧಿಕಾರಿಗಳು ಹೆಚ್ಚುವರಿ ಹಾಸಿಗೆ, ದಿಂಬು ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಒದಗಿಸಿಕೊಟ್ಟಿಲ್ಲ ಎಂದು ದರ್ಶನ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಜೈಲಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.
ಇದೀಗ ಕಾನೂನು ಸೇವೆಗಳ ಪ್ರಾಧಿಕಾರ ದರ್ಶನ್ ಇರುವ ಕ್ವಾರಂಟೈನ್ ಸೆಲ್‌ಗೆ ಭೇಟಿ ನೀಡಿ ಪರಿಶೀಲಿಸಿ ವರದಿಯನ್ನು ಸಲ್ಲಿಸಿದೆ. ದರ್ಶನ್‌ಗೆ ಬೆನ್ನು ನೋವಿದ್ದ ಕಾರಣ ವೈದ್ಯರನ್ನು ಕರೆಸಿ ಸಲಹೆಯನ್ನು ಪಡೆಯಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ವರದಿ ಸಲ್ಲಿಕೆ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಟ ದರ್ಶನ್ ಕೂಡ ಕೋರ್ಟ್‌ಗೆ ಹಾಜರಾಗಿದ್ದರು. ವರದಿ ಸ್ವೀಕರಿಸುವ ನ್ಯಾಯಾಲಯ ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್.29ಕ್ಕೆ ಮುಂದೂಡಿದೆ.
ಮಿಮ್ಸ್ ಎದುರು ಪ್ರತಿಭಟನೆ ಮಂಡ್ಯ: 15 ವರ್ಷದ ಬಾಲಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…