ರಾಜ್ಯ

ನಾಳೆಯಿಂದ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ: ಸರ್ಕಾರದ ವಿರುದ್ಧ ವಿಪಕ್ಷಗಳ ರಣಕಹಳೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ನಾಳೆಯಿಂದ ಆಗಸ್ಟ್.‌22ರವರೆಗೆ ಅಧಿವೇಶನ ನಡೆಯಲಿದುದ, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ.

ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿದ್ದು, ಇದೆಲ್ಲವನ್ನು ಎದುರಿಸಲು ಆಡಳಿತ ಪಕ್ಷ ಕೂಡ ತಯಾರಿ ನಡೆಸಿದೆ. ಆರರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ, ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ, ರಸಗೊಬ್ಬರದ ಅಭಾವ, ಒಳ ಮೀಸಲಾತಿ, ಮತಗಳ್ಳತನದ ಆರೋಪ ಸೇರಿದಂತೆ ಹಲವು ವಿಚಾರಗಳು ಅಧಿವೇಶನದಲ್ಲಿ ಪ್ರತಿಧ್ವನಿಸಲಿವೆ.

ನಾಳೆ ಬೆಳಿಗ್ಗೆ 11 ಗಂಟೆಗೆ ಸದನ ಆರಂಬವಾಗಲಿದ್ದು, ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಸಲ್ಲಿಸಲಾಗುತ್ತದೆ. ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತುಗೊಳಿಸಲಾಗಿತ್ತು. ಈ ನಿರ್ಣಯವನ್ನು ಮೇ 25 ರಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿತ್ತು. ಈ ಕುರಿತಾದ ಸ್ಥಿರೀಕರಣ ಪ್ರಸ್ತಾವ ಮೊದಲ ದಿನವೇ ಮಂಡನೆಯಾಗಲಿದ್ದು, ವಿಧಾನಸಭೆ ಅನುಮೋದನೆ ನೀಡಬೇಕಿದೆ.

ಉಳಿದಂತೆ ಪ್ರಶ್ನೋತ್ತರ ಗಮನ ಸೆಳೆಯುವ ಸೂಚನೆಗಳು, ಕಾಗದ ಪತ್ರಗಳ ಮಂಡನೆ ಸೇರಿದಂತೆ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು ಜರುಗಲಿವೆ.

ಆಂದೋಲನ ಡೆಸ್ಕ್

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

3 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

8 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

8 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

9 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

9 hours ago