ಬೆಂಗಳೂರು-ರಾಜ್ಯ ವಿಧಾನ ಮಂಡಲದ ಉಭಯ ಸದನಗಳ ಜಂಟಿ ಅವೇಶನ ಫೆ.10ರಿಂದ ಪ್ರಾರಂಭವಾಗಲಿದೆ. ಅಂದು ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಸಭಾಂಗಣದಲ್ಲಿ ಜಂಟಿ ಅವೇಶನ ಪ್ರಾರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಉಭಯ ಸದನಗಳ ಸದಸ್ಯರನ್ನುದೇಶಿಸಿ ಭಾಷಣ ಮಾಡಲಿದ್ದಾರೆ.
ಈ ವರ್ಷದ ಮೊದಲ ಅವೇಶನ ಇದಾಗಿದೆ. 15ನೇ ವಿಧಾನಸಭೆಯ ಹದಿನೈದನೇ ಅವೇಶನವಾಗಿದ್ದು, ಇದು ಪ್ರಸಕ್ತ ವಿಧಾನಸಭೆಯ ಕೊನೆಯ ಅವೇಶನ ಕೂಡ ಆಗಲಿದೆ. ಅವೇಶನ ಮುಗಿದ ಬಳಿಕ 16ನೇ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಪ್ರಾರಂಭವಾಗಲಿರುವುದರಿಂದ ಮತ್ತೆ ಅವೇಶನ ಬಹುತೇಕ ನಡೆಯುವುದಿಲ್ಲ. ಶಾಸಕರು ಹಾಗೂ ರಾಜಕೀಯ ನಾಯಕರು ಮತ್ತು ಮುಖಂಡರು ಚುನಾವಣೆಯಲ್ಲಿ ತೊಡಗಿಕೊಳ್ಳುತ್ತಾರೆ.
ಜಂಟಿ ವೇಶನದಲ್ಲಿ ರಾಜ್ಯಪಾಲರು ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರಸ್ತಾಪಿಸುವುದರ ಜತೆ ಈ ವರ್ಷದ ಸರ್ಕಾರದ ಮುನ್ನೋಟದ ಬಗ್ಗೆ ಭಾಷಣದಲ್ಲಿ ಪ್ರಸ್ತಾಪ ಮಾಡುವುದು ರೂಢಿಯಲ್ಲಿದೆ. ಜಂಟಿ ಅವೇಶನ ಮುಗಿದ ಬಳಿಕ ಬಜೆಟ್ ಅವೇಶನ ಪ್ರತ್ಯೇಕವಾಗಿ ನಡೆಸುವ ಸಂಪ್ರದಾಯವಿತ್ತು. ಆದರೆ, ವಿಧಾನಸಭೆ ಚುನಾವಣಾ ವರ್ಷವಾಗಿರುವುದರಿಂದ ಜಂಟಿ ಅವೇಶನದ ಜತೆಗೆ ಬಜೆಟ್ ಅವೇಶನ ಪ್ರಾರಂಭವಾಗಲಿದೆ.
ಫೆ.13ರಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಅಕೃತ ಕಾರ್ಯಕಲಾಪಗಳು ಫೆ. 16ರವರೆಗೂ ನಡೆಯಲಿವೆ. ಈ ಸಂದರ್ಭದಲ್ಲಿ ಪ್ರಶ್ನೋತ್ತರ ಸೇರಿದಂತೆ ಅಕೃತ ಕಾರ್ಯಕಲಾಪಗಳ ಜತೆಗೆ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ನಡೆಯಲಿದೆ. ಚರ್ಚೆಗೆ ಸರ್ಕಾರ ಉತ್ತರ ನೀಡಿದ ಬಳಿಕ ವಂದನಾ ನಿರ್ಣಯವನ್ನು ಸದನದಲ್ಲಿ ಅಂಗೀಕರಿಸಲಾಗುವುದು.
ಫೆ.17ರಂದು ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಮುಂಗಡಪತ್ರವನ್ನು ಮಂಡಿಸಲಿದ್ದಾರೆ. ಚುನವಣಾ ವರ್ಷವಾಗಿರುವುದರಿಂದ ಮುಖ್ಯಮಂತ್ರಿಗಳು ಜನಪ್ರಿಯ ಕಾರ್ಯಕ್ರಮ ಮತ್ತು ಯೋಜನೆಗಳನ್ನು ಘೋಷಣೆಗಳನ್ನು ಮಾಡುವ ಸಾಧ್ಯತೆ ಹೆಚ್ಚಾಗಿದೆ.
ಫೆ.10ರಂದು ಅವೇಶನ ಪ್ರಾರಂಭವಾಗಿ ಫೆಬ್ರವರಿ ಅಂತ್ಯದವರೆಗೂ ಅವೇಶನ ನಡೆಯುವ ಸಾಧ್ಯತೆಗಳಿವೆ. ಬಜೆಟ್ ಮಂಡನೆ ಬಳಿಕ ಉಭಯ ಸದನಗಳಲ್ಲಿ ಬಜೆಟ್ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ. ಬಳಿಕ ಸರ್ಕಾರ ಶಾಸಕರು ಮಾಡಿದ ಚರ್ಚೆಗೆ ಉತ್ತರ ನೀಡಲಿದೆ. ಆ ನಂತರ ಉಭಯ ಸದನಗಳಲ್ಲಿ ಮುಂಗಡ ಪತ್ರಕ್ಕೆ ಅನುಮೋದನೆ ಪಡೆಯುವುದು ವಾಡಿಕೆ.
ಚುನಾವಣಾ ವರ್ಷದಲ್ಲಿ ಪೂರ್ಣ ಪ್ರಮಾಣದ ಆಯವ್ಯಯ ಮಂಡಿಸದೇ ಜೂನ್ ಅಂತ್ಯದವರೆಗೆ ಲೇಖಾನುದಾನ ಪಡೆಯುವ ಸಂಪ್ರದಾಯವಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತಿದೆ.
ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಸಜ್ಜಾಗುತ್ತಿವೆ. ಪ್ರತಿಪಕ್ಷಗಳ ವಾಗ್ದಾಳಿ ಎದುರಿಸಲು ಆಡಳಿತ ಪಕ್ಷವೂ ಸಿದ್ಧವಾಗುತ್ತಿದೆ. ಒಟ್ಟಾರೆ ಈ ಅವೇಶನ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಗ್ಸಮರಕ್ಕೆ ವೇದಿಕೆಯಾಗಲಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Article‘ಸುಧಾಕರ್ಗೆ ಸಿಎಜಿ ವರದಿ ಅರ್ಥವಾಗಿಲ್ಲ’ : ಸಿದ್ದರಾಮಯ್ಯ