ಬೆಂಗಳೂರು: ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ನರಭಕ್ಷಕ ಚಿರತೆ ಬೋನಿಗೆ ಬಿದ್ದಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಸತತ ಒಂದು ವಾರದ ನಿರಂತರ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ವಾರ ಮಹಿಳೆಯೋರ್ವರನ್ನು ಬಲಿ ಪಡೆದಿದ್ದ ಚಿರತೆ, ಆಗಾಗ್ಗೆ ಸ್ಥಳೀಯರಿಗೆ ಕಾಣಿಸಿಕೊಳ್ಳುತ್ತಿತ್ತು.
ಈ ಹಿನ್ನೆಲೆಯಲ್ಲಿ ಸ್ಥಳೀಯರ ಮನವಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಬೋನು ಅಳವಡಿಸಿದ್ದರು. ಈ ಬೋನಿಗೆ ಚಿರತೆ ಸೆರೆಯಾಗಿದ್ದು, ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಆದರೆ ಮಹಿಳೆ ಬಲಿ ಪಡೆದಿದ್ದು ಈ ಚಿರತೆನಾ ಎಂಬುದು ಇನ್ನೂ ತಿಳಿದು ಬಂದಿಲ್ಲ. ಡಿಎನ್‌ಎ ಪರೀಕ್ಷೆಯ ಬಳಿಕ ಈ ಬಗ್ಗೆ ದೃಢವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನೆಲಮಂಗಲ ತಾಲ್ಲೂಕಿನ ಗೊಲ್ಲರಹಟ್ಟಿಯಲ್ಲಿ ಕರಿಯಮ್ಮ ಎಂಬುವವರ ಮೇಳೆ ಚಿರತೆ ದಾಳಿ ನಡೆಸಿ ಕೊಂದುಹಾಕಿತ್ತು. ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ವೇಳೆ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿತ್ತು. ಬಳಿಕ ರುಂಡ ಮುಂಡ ಪ್ರತ್ಯೇಕವಾದ ಸ್ಥಿತಿಯಲ್ಲಿ ಕರಿಯಮ್ಮನ ಶವ ಪತ್ತೆಯಾಗಿತ್ತು.





