ರಾಜ್ಯ

ಕನ್ನಡ ಚಿತ್ರರಂಗದಲ್ಲಿ ಹೆಚ್ಚು ಚಿತ್ರಗಳು ನಿರ್ಮಾಣವಾಗಲಿ ; ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು : ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ಕನ್ನಡ ಚಿತ್ರರಂಗಕ್ಕೆ ಭವ್ಯ ಇತಿಹಾಸವಿದೆ. ಗಟ್ಟಿ ಅಡಿಪಾಯವಿದೆ. ಡಾ. ರಾಜ್ ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರು ಕನ್ನಡ ಚಿತ್ರರಂಗವನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದ್ದಾರೆ. ಇದು ಇನ್ನಷ್ಟು ಭದ್ರವಾಗಬೇಕಾದರೆ ಹೆಚ್ಚೆಚ್ಚು ಸಿನಿಮಾಗಳು ಬರಬೇಕು. ಆ ಶ್ರೇಷ್ಠ ನಟರ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಅವರು ಪ್ರತಿಪಾದಿಸಿದರು. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರು ನಿರ್ದೇಶಕರಾಗಿ 50 ವರ್ಷ ಪೂರೈಸಿದ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇದನ್ನು ಓದಿ: ದಸರಾ ಚಲನಚಿತ್ರೋತ್ಸವ: ಕನ್ನಡ ಸಿನಿಮಾ ಬೆಳೆದು ಬಂದ ಹಾದಿ ಸಿನಿ ಫೋಟೋ ಪ್ರದರ್ಶನದ ಚಾಲನೆ

ನಮ್ಮ ಮಾತೃಭಾಷೆಯ ಸಿನಿಮಾಗಳು ಕಡಿಮೆ ಪ್ರಮಾಣದಲ್ಲಿ ಬರುತ್ತಿರುವ ಹಿನ್ನೆಲೆಯಲ್ಲಿ ಡಬ್ಬಿಂಗ್ ಸಿನಿಮಾಗಳನ್ನು ಜನ ನೋಡುತ್ತಿದ್ದಾರೆ. ನಮ್ಮಲ್ಲಿ ಉತ್ತಮ ನಿರ್ದೇಶಕರು, ಉತ್ತಮ ಕಥೆಗಳು ಲಭ್ಯ ಇರುವುದರಿಂದ ನಮ್ಮವೇ ಚಿತ್ರಗಳು ದೊಡ್ಡ ಸಂಖ್ಯೆಯಲ್ಲಿ ಬರಲಿ ಎನ್ನುವುದು ನನ್ನ ಆಶಯ ಎಂದು ಸಚಿವರು ಹೇಳಿದರು. ಇವತ್ತು ಕನ್ನಡ ಚಿತ್ರರಂಗ ಎತ್ತರದ ಸಾಧನೆಗಳನ್ನು ಮಾಡುತ್ತಿದೆ. ಉತ್ತಮ ಸಿನಿಮಾಗಳು ಬರುತ್ತಿವೆ.

ಭಾರತೀಯ ಚಿತ್ರರಂಗ ನಮ್ಮನ್ನು ಬೆರಗಿನಿಂದ ನೋಡುತ್ತಿದೆ. ಆದರೂ ಕನ್ನಡ ಚಿತ್ರಗಳು ಇನ್ನು ಹೆಚ್ಚಿನ ಸಂಖೆಯಲ್ಲಿ ಯಶಸ್ಸು ಸಾಧಿಸಬೇಕು ಹಾಗೂ ನಿರ್ಮಾಪಕರು ಉತ್ತಮ ಚಿತ್ರಗಳನ್ನು ನಿರ್ಮಿಸಲು ಅವಕಾಶ ಆಗಬೇಕು ಎಂದು ಕುಮಾರಸ್ವಾಮಿ ಅವರು ನುಡಿದರು. ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು; ನಿರ್ದೇಶಕರಾಗಿ, ನಿರ್ಮಾಪಕರಾಗಿ ಐದು ದಶಕಗಳ ಕಾಲ ನಿಲ್ಲುವುದು ಸುಲಭದ ಮಾತಲ್ಲ. ತಮ್ಮ ಇಡೀ ಕುಟುಂಬವನ್ನೇ ಚಿತ್ರರಂಗಕ್ಕೆ ಸಮರ್ಪಣೆ ಮಾಡಿಕೊಂಡ ಕುಟುಂಬ ಅವರದ್ದು. ನಾನು ಚಿತ್ರ ಪ್ರದರ್ಶಕನಾಗಿ, ಹಂಚಿಕೆದಾರನಾಗಿ ಹಾಗೂ ನಿರ್ಮಾಪಕನಾಗಿ ಕೆಲಸ ಮಾಡಿದ್ದೇನೆ.

ರಾಜೇಂದ್ರ ಸಿಂಗ್ ಬಾಬು ಅವರ ಚಿತ್ರಗಳನ್ನು ನಾನು ಹಂಚಿಕೆ ಮಾಡಿ ಪ್ರದರ್ಶಿಸಿದ್ದೇನೆ ಎಂದು ನೆನಪು ಮಾಡಿಕೊಂಡರು. ಉತ್ತಮ ಕಥೆಗಳು, ಅಂದರೆ ಕಾದಂಬರಿ ಆಧರಿತ ಚಿತ್ರಗಳನ್ನು ನಿರ್ದೇಹಿಸುತ್ತಿದ್ದ ಪುಟ್ಟಣ್ಣ ಕಣಗಾಲ್, ಸಿದ್ಧಲಿಂಗಯ್ಯ ಅವರ ಸಾಲಿಗೆ ಸೇರುವಂತಹ ನಿರ್ದೇಶಕರು ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್ ಅಶ್ವತ್ಥನಾರಾಯಣ, ಮಾಜಿ ಸಚಿವ ಮುನಿರತ್ನ, ನಾಯಕ ನಟರಾದ ಕಿಚ್ಚ ಸುದೀಪ್, ಬ್ರಹ್ಮಾಂಡ ಗುರೂಜಿ, ರಾಕ್ ಲೈನ್ ವೆಂಕಟೇಶ್, ಬಸಂತ ಕುಮಾರ್ ಪಾಟೀಲ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ, ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಪ್ರಕಾಶಕ ವೀರಕಪುತ್ರ ಶ್ರೀನಿವಾಸ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

42 mins ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

6 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

6 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

6 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

6 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

6 hours ago