ರಾಜ್ಯ

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ, ರಾಯಚೂರು ಜಿಲ್ಲಾ ಉಸ್ತುವಾರಿ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಜೀವನೋಪಾಯ ಮತ್ತು ಉದ್ಯಮಶೀಲತೆ ಇಲಾಖೆ ಜಂಟಿಯಾಗಿ “ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶ” ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಬುಧವಾರ ಸಚಿವರು ಭಾಷಣ ಮಾಡಿದರು.

ಎಲ್ಲ ಕ್ಷೇತ್ರದಲ್ಲಿಯೂ ಮಹಿಳೆಯರ ಪ್ರಾಬಲ್ಯ ಹೆಚ್ಚಿದೆ. ನೈಸರ್ಗಿಕ ಕೃಷಿ ಪದ್ಧತಿಯಲ್ಲಿಯೂ ಯಶಸ್ಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ, ಮಹಿಳೆಯರು ಈ ರೂಪಾಂತರದ ಕೇಂದ್ರದಲ್ಲಿದ್ದಾರೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ – ಸಂಜೀವಿನಿ ಮೂಲಕ, ಮಹಿಳಾ ಸ್ವಸಹಾಯ ಗುಂಪುಗಳು ರಾಸಾಯನಿಕ-ಮುಕ್ತ, ಕಡಿಮೆ-ವೆಚ್ಚದ ನೈಸರ್ಗಿಕ ಕೃಷಿಯನ್ನು ಅಭ್ಯಾಸ ಮಾಡುತ್ತಿವೆ, ಕೃಷಿ ಸಖಿಗಳು ಮತ್ತು ಸಮುದಾಯ ಸಂಪನ್ಮೂಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸುತ್ತಿವೆ ಮತ್ತು ಜೈವಿಕ-ಇನ್‌ಪುಟ್ ಉತ್ಪಾದನೆ ಮತ್ತು ಮೌಲ್ಯವರ್ಧನೆಯಲ್ಲಿ ಪ್ರಮುಖ ಉದ್ಯಮಗಳನ್ನು ನಡೆಸುತ್ತಿವೆ. ಇದು ಗಮನಾರ್ಹ ವಿಷಯ ಎಂದು ಡಾ. ಪಾಟೀಲ್‌ ವಿವರಿಸಿದರು.

ನೈಸರ್ಗಿಕ ಕೃಷಿ ಪದ್ಧತಿಗಳು ಮಹಿಳೆಯರಿಗೆ ಕೌಶಲ್ಯಪೂರ್ಣ ಮತ್ತು ಗೌರವಾನ್ವಿತ ಗ್ರಾಮೀಣ ಉದ್ಯೋಗವನ್ನು ಸೃಷ್ಟಿಸಿವೆ. ಸುಮಾರು 5.26 ಲಕ್ಷ ಸ್ವಸಹಾಯ ಸಂಘದ ಸದಸ್ಯರು ಮಣ್ಣಿನ ಆರೋಗ್ಯ ನಿರ್ವಹಣೆ, ಹವಾಮಾನ-ಸ್ಥಿತಿಸ್ಥಾಪಕ ಬೆಳೆ ಪದ್ಧತಿಗಳು, ಸಂಸ್ಕರಣೆ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕಗಳಲ್ಲಿ ಕೌಶಲ್ಯ ಹೊಂದುತ್ತಿದ್ದಾರೆ ಎಂದು ಡಾ. ಪಾಟೀಲ್‌ ತಿಳಿಸಿದರು.

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಮಾತನಾಡಿ, ಕೃಷಿ ಇಲಾಖೆಯಲ್ಲಿ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ನೈಸರ್ಗಿಕ ಕೃಷಿಗೆ ಆದ್ಯತೆ ನೀಡಲು ಹೆಚ್ಚು ಕ್ರಮ ವಹಿಸಲಾಗುತ್ತದೆ ಎಂದರು.

ಕರ್ನಾಟಕದಲ್ಲಿ ಕೃಷಿ ವಲಯಕ್ಕೆ ಭರಪೂರ ಅನುದಾನವನ್ನು ಒದಗಿಸಲಾಗುತ್ತದೆ. ರೈತರು ಹಾಗೂ ಪ್ರಮುಖವಾಗಿ ರೈತ ಮಹಿಳೆಯರಿಗೆ ಸೌಲಭ್ಯಗಳನ್ನು ನೀಡಿ, ಸಬಲೀಕರಣಕ್ಕೆ ನಮ್ಮ ಸರ್ಕಾರ ಆದ್ಯತೆ ಒದಗಿಸಲಿದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು.

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಜಂಟಿ ಕಾರ್ಯದರ್ಶಿ ಸ್ವಾತಿ ಶರ್ಮಾ, ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಅಭಿಯಾನದ ನಿರ್ದೇಶಕಿ ಆರ್. ಸ್ನೇಹಲ್ ಮತ್ತು ಹೆಚ್ಚುವರಿ ಅಭಿಯಾನ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಕಾಲೇಜು ವಿದ್ಯಾರ್ಥಿನಿಯರಿಗೆ ಬಿಸಿಯೂಟ ಶ್ಲಾಘನೀಯ

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…

3 hours ago

ಓದುಗರ ಪತ್ರ: ಪೊಲೀಸ್ ಅಧಿಕಾರಿಯ ಅಸಭ್ಯ ವರ್ತನೆ ಅಕ್ಷಮ್ಯ

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…

3 hours ago

ಓದುಗರ ಪತ್ರ: ಅಮೆರಿಕ ಅಧ್ಯಕ್ಷರ ಹುಚ್ಚುತನ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…

3 hours ago

ಕಾಡ್ಗಿಚ್ಚು ತಡೆಗೆ ನಾನಾ ಮುಂಜಾಗ್ರತಾ ಕ್ರಮ

ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…

3 hours ago

ಬಾಚಳ್ಳಿ ಆಂಜನೇಯಸ್ವಾಮಿ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆ

ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…

3 hours ago