Mysore
23
broken clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಮುಸ್ಲಿಮರು 2 ಮಕ್ಕಳು ಮಾಡಿಕೊಳ್ಳಲಿ ಎಂದು ಸಿಎಂ ಹೇಳಲಿ: ಆರ್.ಅಶೋಕ

ಬೆಂಗಳೂರು: ಮುಸ್ಲಿಮರು ಕೂಡ ಎರಡು ಮಕ್ಕಳ ನೀತಿ ಅನುಸರಿಸಿ ಎಂದು ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದವರಿಗೆ ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  ಹೇಳಿದ್ದಾರೆ.

ಸೋಮವಾರ  ವಿಧಾನಸೌದದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಹಿಂದೂಗಳು ಎರಡು ಮಕ್ಕಳನ್ನು ಮಾಡಿಕೊಂಡು ಕುಟುಂಬ ಯೋಜನೆ ಸೇವೆಗೆ ಸಹಕಾರ ನೀಡಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಸಲಹೆಗೆ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಇದೇ ವಿಷಯವನ್ನು ಹೋಗಿ ಮುಸ್ಲಿಮರಿಗೆ ಹೇಳುತ್ತಾರಾ? ಹಿಂದೂಗಳ ಸಂಖ್ಯೆ ಕಡಿಮೆ ಆಗಿ ಮುಸ್ಲಿಮರ ಸಂಖ್ಯೆ ಜಾಸ್ತಿಯಾಗಲಿ ಎಂದು ಸಿದ್ದರಾಮಯ್ಯ ಕುತಂತ್ರ ಮಾಡುತ್ತಿದ್ದಾರೆ. ಮೊನ್ನೆ ಸ್ವಾಮೀಜಿಗಳು ಹಿಂದೂಗಳು ಜಾಸ್ತಿ ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕೌಂಟರ್‌ ನೀಡಿದ್ದಾರೆ ಎಂದು ಆರೋಪ ಮಾಡಿದರು.

ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನು ಓಲೈಕೆ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ  ರಾಜ್ಯದ ಕಾನೂನು ಸುವ್ಯವಸ್ಥೆ  ಸಂಪೂರ್ಣವಾಗಿ ಹಾಳಾಗಲಿದೆ ಎಂದು ಕಿಡಿಕಾರಿದ್ದಾರೆ.

Tags:
error: Content is protected !!