ಬೆಂಗಳೂರು: ಮುಸ್ಲಿಮರು ಕೂಡ ಎರಡು ಮಕ್ಕಳ ನೀತಿ ಅನುಸರಿಸಿ ಎಂದು ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದವರಿಗೆ ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸೋಮವಾರ ವಿಧಾನಸೌದದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಹಿಂದೂಗಳು ಎರಡು ಮಕ್ಕಳನ್ನು ಮಾಡಿಕೊಂಡು ಕುಟುಂಬ ಯೋಜನೆ ಸೇವೆಗೆ ಸಹಕಾರ ನೀಡಿ ಎಂಬ ಸಿಎಂ ಸಿದ್ದರಾಮಯ್ಯ ಅವರ ಸಲಹೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ ಇದೇ ವಿಷಯವನ್ನು ಹೋಗಿ ಮುಸ್ಲಿಮರಿಗೆ ಹೇಳುತ್ತಾರಾ? ಹಿಂದೂಗಳ ಸಂಖ್ಯೆ ಕಡಿಮೆ ಆಗಿ ಮುಸ್ಲಿಮರ ಸಂಖ್ಯೆ ಜಾಸ್ತಿಯಾಗಲಿ ಎಂದು ಸಿದ್ದರಾಮಯ್ಯ ಕುತಂತ್ರ ಮಾಡುತ್ತಿದ್ದಾರೆ. ಮೊನ್ನೆ ಸ್ವಾಮೀಜಿಗಳು ಹಿಂದೂಗಳು ಜಾಸ್ತಿ ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಕೌಂಟರ್ ನೀಡಿದ್ದಾರೆ ಎಂದು ಆರೋಪ ಮಾಡಿದರು.
ಸಿಎಂ ಸಿದ್ದರಾಮಯ್ಯ ಮುಸ್ಲಿಮರನ್ನು ಓಲೈಕೆ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಲಿದೆ ಎಂದು ಕಿಡಿಕಾರಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…