ರಾಜ್ಯ

ಯತ್ನಾಳ್‌ ಕೋವಿಡ್‌ ಭ್ರಷ್ಟಾಚಾರ ದಾಖಲೆಯನ್ನು ತನಿಖಾ ಆಯೋಗಕ್ಕೆ ನೀಡಲಿ: ಸಿಎಂ

ಕೊಪ್ಪಳ: ಬಿ.ಎಸ್‌ ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಸರ್ಕಾರ ಅವಧಿಯಲ್ಲಿ 40 ಸಾವಿರ ಕೋಟಿ ರೂ. ಕೊವಿಡ್‌ ಹಗರಣ ನಡೆದಿದೆ ಎಂದು ಆರೋಪ ಮಾಡಿರುವ ಬಿಜೆಪಿ ಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಅಕ್ರಮ ಸಂಬಂಧ ದಾಖಲೆಗಳನ್ನು ತನಿಖಾ ಆಯೋಗಕ್ಕೆ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸಾಕಷ್ಟು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಯತ್ನಾಳ್‌ ಆರೋಪಿಸಿದ್ದಾರೆ. ಬಿಜೆಪಿ ಕಾಲಾವಧಿಯಲ್ಲಿ ನಡೆದ ಹಗರಣಗಳ ಕುರಿತು ತನಿಖೆ ನಡೆಸಲು ಆಯೋಗ ರಚಿಸಿದ್ದೇವೆ. ಭ್ರಷ್ಟಾಚಾರ ಆರೋಪ ಮಾಡಿರುವ ಯತ್ನಾಳ್‌ ಅವರು ದಾಖಲೆಗಳನ್ನು ಆಯೋಗಕ್ಕೆ ಒದಗಿಸಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇನ್ನೂ ಬಸವರಾಜ ರಾಯರೆಡ್ಡಿ ಅವರನ್ನು ಸಿಎಂ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿರುವ ಕುರಿತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ರಾಯರೆಡ್ಡಿ ಆರ್ಥಿಕ ತಜ್ಞರೇ, ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ರಾಯರೆಡ್ಡಿ ಸಾಕಷ್ಟು ಆರ್ಥಿಕ ವಿಷಯಗಳನ್ನು ತಿಳಿದುಕೊಂಡಿದ್ದಾರೆ. ಹೀಗಾಗಿ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಈ ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗಲೂ ರಾಯರೆಡ್ಡಿ ಅವರನ್ನು ಆರ್ಥಿಕ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದರು. ಅದರ ಬಗ್ಗೆ ಯಾರು ಕೇಳುವುದಿಲ್ಲ ಎಂದರು.

andolanait

Recent Posts

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

1 hour ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

1 hour ago

ಕಸ್ತೂರಿ ರಂಗನ್ ವರದಿ: ದೇವರ ಕಾಡುಗಳಿಗೂ ಆತಂಕ

ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ  ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…

2 hours ago

ರಸ್ತೆ ಡುಬ್ಬ ನಿರ್ಮಿಸಿ; ಅಪಘಾತ ತಪ್ಪಿಸಿ

ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ  ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…

2 hours ago

ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ, ವಾಹನಗಳ ತಂಗುದಾಣ

ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…

2 hours ago