ರಾಜ್ಯ

ಮನೆಗೊಂದು ಕಲಾಕೃತಿ ಇರಲಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಬೆಂಗಳೂರು : ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ಆಯೋಜಿಸಲಾಗಿದ್ದ 22 ನೇ ಚಿತ್ರ ಸಂತೆ ಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ರಾಜ್ಯ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರ ಕಲಾ ಪರಿಷತ್ತು ಮಾಡುತ್ತಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಚಿತ್ರಸಂತೆ ಆಯೋಜಿಸಿದ್ದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಚಿತ್ರಸಂತೆಯಲ್ಲಿ 22 ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ.ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಟ ನಡೆಯುವುದು ಹೆಮ್ಮೆಯ ಸಂಗತಿ ಎಂದರು.

ಕಲಾವಿದರಿಗೆ ವೇದಿಕೆ
ಅನೇಕ ಚಿತ್ರಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಪ್ರದರ್ಶಿಸಿ ಆಸಕ್ತರಿಗೆ ಕೊಳ್ಳುವ ಅವಕಾಶವನ್ನೂ ಚಿತ್ರದಂತೆ ಒದಗಿಸುತ್ತಿದೆ. ಒಂದು ದಿನಕ್ಕೆ ನಾಲ್ಕು ಲಕ್ಷ ಜನರು ಭೇಟಿ ನೀಡುತ್ತಾರೆ. ಬೆಂಗಳೂರಿಗೆ ಇದೊಂದು ಸುವರ್ಣಾವಕಾಶ ಎಂದರು .

ಚಿತ್ರಸಂತೆ ಮಹಿಳೆಯರಿಗೆ ಸಮರ್ಪಿತ
ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರವಾಗಿ ಕೆಲಸ ಮಾಡಿದ ಮಹಾತ್ಮಾ ಗಾಂಧಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಬಾಯಿ ಚಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶಿಸಿದ್ದಾರೆ. ಒಬ್ಬ ಪುರುಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ .ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಒಂದು ಕುಟುಂಬವೇ ಕಲಿತಂತಾಗುತ್ತದೆ ಎಂದರು.

ಮಹಿಳಾ ಸಬಲೀಕರಣಕ್ಕಾಗಿ ಶಕ್ತಿ ಹಾಗೂ ಗೃಹಲಕ್ಷ್ಮೀ ಯೋಜನೆ
ಹೆಣ್ಣುಮಕ್ಕಳು ಶೋಷಣೆ, ತಾರತಮ್ಯ, ಅನ್ಯಾಯಕ್ಕೆ ಒಳಗಾದವರು. ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

ಸಾವಿರ ಪದಗಳಿಗಿಂತಲೂ ಚಿತ್ರವೊಂದು ಪ್ರಭಾವಶಾಲಿ
ಸಂವಿಧಾನದ ಪೀಠಿಕೆಯನ್ನು ಕೂಡ ಇಲ್ಲಿ ಪ್ರದರ್ಶಿಸಲಾಗಿದ್ದು, ಸಮಾಜದ ಎಲ್ಲಾ ವರ್ಗದ ಜನರನ್ನೂ ಪ್ರತಿನಿಧಿಸುತ್ತಿದೆ. ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿಯಾಗಿದೆ. ಚಿತ್ರದ ಮೂಲಕ ಜನಜೀವನ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸಬಹುದಾಗಿದೆ. ಚಿತ್ರಕಲಾ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

26 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

50 mins ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

1 hour ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

1 hour ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

2 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

3 hours ago